ಬೆಂಗಳೂರು:ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಕನ್ನಡ ಚಿತ್ರ ನಿರ್ಮಾಪಕ ಶಂಕರೇಗೌಡ ಅವರನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಡ್ರಗ್ಸ್​ ಮಾಫಿಯಾ ಪ್ರಕರಣದಕ್ಕೆ ಸಂಬಂಧಿಸಿದ್ದಂತೆ ಶಂಕರೇಗೌಡ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಕೆಲವು ದಿನಗಳ ಹಿಂದೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಹಲವಾರು ಮಾಹಿತಿ ಹಾಗೂ ದಾಖಲೆಗಳನ್ನು ಕಲೆ ಹಾಕಿದ್ದರು. ಅಲ್ಲದೆ ಶಂಕರೇಗೌಡ ಅವರನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಟ್ಟಿದ್ದರು.
ಈ ಮಧ್ಯೆ ಮತ್ತಷ್ಟು ಮಾಹಿತಿ ಹಾಗೂ ದಾಖಲೆಗಳನ್ನು ಕಲೆ ಹಾಕಿರುವ ಪೊಲೀಸರು, ಇದುವರೆಗಿನ ವಿಚಾರಣೆ ಹಾಗೂ ಲಭ್ಯ ದಾಖಲೆಗಳ ಆಧಾರದ ಮೇಲೆ ಶಂಕರೇಗೌಡ ಅವರನ್ನು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದ್ದು, ಮುಂದಿನ ಬೆಳವಣಿಗೆಗಳ ಕುರಿತ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಡ್ರಗ್ಸ್​ ಮಾಫಿಯಾ ಸದ್ದು; ನಿರ್ಮಾಪಕರೊಬ್ಬರ ಕಚೇರಿ ಮೇಲೆ ಪೊಲೀಸರ ದಾಳಿ

ಕಳ್ಳನ ಲವರ್‌ಗೂ ಚಿನ್ನದ ವ್ಯಾಪಾರಿಯ ಲವರ್‌ಗೂ ಇತ್ತು ಪರಿಚಯ; ಆಕೆ ಕೊಟ್ಟ ಮಾಹಿತಿ ಮೇರೆಗೆ ಚಿನ್ನ ದೋಚಿದ್ದ ಮೂವರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
