ಬೆಂಗಳೂರು:ಕಾರ್ವಿುಕ ಕಾಯ್ದೆ ತಿದ್ದುಪಡಿ, ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ತಿದ್ದುಪಡಿ ವಿಧೇಯಕ (ಸಿಬ್ಬಂದಿ ಮತ್ತು ನೇಮಕ), ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ವಿಧೇಯಕ ವಾಪಸ್ ಸೇರಿ ಹಲವು ತೀರ್ವನಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ. ಕಾರ್ವಿುಕರ ತೀವ್ರ ವಿರೋಧದ ನಡುವೆಯೂ ಕೈಗಾರಿಕಾ ವಿವಾದಗಳು ಮತ್ತು ಇತರ ಕೆಲ ಕಾನೂನುಗಳ ತಿದ್ದುಪಡಿ ಸುಗ್ರೀವಾಜ್ಞೆಯನ್ನು ಸಂಪುಟ ಸಭೆ ಅಂಗೀಕರಿಸಿದೆ.
ದಿನಕ್ಕೆ 35-40 ನಿಮಿಷ ಹೆಚ್ವುವರಿ ಕೆಲಸ:ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, ಕೈಗಾರಿಕಾ ಕಾಯ್ದೆ 1948 ಸೆಕ್ಷನ್ 64, 65ಕ್ಕೆ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದ್ದು, ಕಾರ್ವಿುಕರ ಹೆಚ್ಚುವರಿ ಕೆಲಸದ ಮಿತಿ ಹೆಚ್ಚಳ ಮಾಡಲಾಗಿದೆ. ಮೂರು ತಿಂಗಳಿಗೆ 75 ಗಂಟೆಯಿಂದ 125 ಗಂಟೆ ಹೆಚ್ಚುವರಿ ಕೆಲಸ ಮಾಡಲು ಅವಕಾಶ ನೀಡಲಾಗಿದೆ. ಅಂದರೆ 3 ತಿಂಗಳಿಗೆ 50 ಗಂಟೆ ಹೆಚ್ಚುವರಿ ಕೆಲಸ ಮಾಡಬೇಕು. ದಿನಕ್ಕೆ ಕನಿಷ್ಠ 35 ರಿಂದ 40 ನಿಮಿಷ ಹೆಚ್ಚಳ ಆಗಲಿದೆ ಎಂದು ವಿವರಿಸಿದರು. ಕೈಗಾರಿಕಾ ವಿವಾದ ಕಾಯ್ದೆಯ ಸೆಕ್ಷನ್ 25(ಕೆ) ಅಡಿ ಕಾರ್ವಿುಕರ ಮಿತಿಯನ್ನು 100 ರಿಂದ 300ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಡ್ರಗ್ಸ್ ಮತ್ತು ಲಾಜಿಸ್ಟಿಕ್ ಸೊಸೈಟಿಯನ್ನು ನಿಗಮ ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯ ವಿಶ್ವವಿದ್ಯಾಲಯಗಳ ವಿಧೇಯಕ 2017ನ್ನು ವಾಪಸ್ ಪಡೆದಿದ್ದು, ಸಮಗ್ರ ವಿಧೇಯಕ ತರಲು ಸಭೆ ತೀರ್ವನಿಸಿದೆ ಎಂದರು. ಭಷ್ಟಾಚಾರ ನಿಗ್ರಹ ದಳ(ಎಸಿಬಿ) ಕೇಡರ್ ನೇಮಕಾತಿಗೆ ಒಪ್ಪಿಗೆ ನೀಡಿದ್ದು, ನಿಯೋಜನೆ ಆಧಾರದ ಮೇಲೆ ನೇಮಕ ಮಾಡಲು ನಿಯಾಮಾವಳಿಗೆ ತಿದ್ದುಪಡಿ ತರಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಎಂಎಸ್​ಎಂಇಗೆ ಪೋ›ತ್ಸಾಹ:ಕರೊನಾ ಲಾಕ್​ಡೌನ್​ನಿಂದ ಸಂಕಷ್ಟಕ್ಕೀಡಾಗಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ವಲಯಕ್ಕೆ ಸಬ್ಸಿಡಿ ರೂಪದಲ್ಲಿ ಶೇ.10 ರಿಂದ ಶೇ.6ಕ್ಕೆ ಬಡ್ಡಿ ದರವನ್ನು ಇಳಿಕೆ ಮಾಡಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಕೆಎಸ್​ಎಫ್​ಸಿಗೆ 150 ಕೋಟಿ ರೂ. ಸಾಲ ಪಡೆಯಲು ಸರ್ಕಾರದಿಂದ ಖಾತ್ರಿ ನೀಡಲು ನಿರ್ಣಯಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.
ಸರಕು ಸಾಗಣೆ ಮತ್ತು ಸೇವಾ ತೆರಿಗೆ ತಿದ್ದುಪಡಿ ವಿಧೇಯಕ, ಕರ್ನಾಟಕ ಕೈಗಾರಿಕಾ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ. ಬೀದರ್ ಮೆಡಿಕಲ್ ಕಾಲೇಜ್​ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 29.87 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ, ಅಂಕೋಲಾ ಬಳಿ ನೌಕಾದಳದ ಕಾರ್ಯಾಚರಣೆಗೆ ನಿರ್ವಣವಾಗುತ್ತಿರುವ ವಿಮಾನ ನಿಲ್ದಾಣದಲ್ಲಿ ಸಿವಿಲ್ ಸೇವೆಗೆ ಅನುಮತಿ ನೀಡಲಾಗಿದೆ. ಅದಕ್ಕೆ ರಾಜ್ಯದ ಪಾಲಿನ ಪೈಕಿ 10.20 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ ಎಂದರು.
ಇಲಾಖೆಗಳ ವಿಲೀನ
ಪಿಂಚಣಿ, ಸಣ್ಣ ಉಳಿತಾಯ ಹಾಗೂ ಆಸ್ತಿ ಋಣ ಇಲಾಖೆಗಳನ್ನು ಖಜಾನೆ ಇಲಾಖೆ ಜತೆಗೆ ವಿಲೀನಗೊಳಿಸಲು ತೀರ್ವನಿಸಲಾಗಿದ್ದು, ಕ್ರಿಯಾತ್ಮಕ ಸಂಸ್ಥೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.
ಪ್ರಮುಖ ತೀರ್ವನಗಳು
ಒಂದೇ ದಿನ 5030 ಮಂದಿಗೆ ಸೋಂಕು- ನಿಮ್ಮ ಜಿಲ್ಲೆಯ ಸ್ಥಾನ ಎಷ್ಟಿದೆ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
