ಬೆಂಗಳೂರು:ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ನೀಡಿದ ಐದು ಭರವಸೆಗಳಲ್ಲಿ ಉಚಿತ ಬಸ್ ಪ್ರಯಾಣವೂ ಒಂದು. ಅಧಿಕಾರ ಗದ್ದು ಏರಿದ ಕಾಂಗ್ರೆಸ್​​ ಸರ್ಕಾರ ಇಂದು ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿರುವ ಕುರಿತಾಗಿ ಘೋಷಣೆ ಮಾಡಿದೆ.
ಶಕ್ತಿ ಯೋಜನೆ ಮೂಲಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಿದ್ದರಾಮಯ್ಯ ಹೇಳಿದರು. ಈ ಯೋಜನೆಯನ್ನು ಕಾಂಗ್ರೆಸ್​​ ಸರ್ಕಾರ ಕೆಲವು ಷರತ್ತುಗಳನ್ನು ವಿಧಿಸುವ ಮೂಲಕವಾಗಿ ಜಾರಿಗೆ ತಂದಿದೆ. ಶಕ್ತಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ) ಜೂನ್‌ 11 ರಿಂದ ಜಾರಿಗೆ ಬರಲಿದೆ. ಆದರೆ ಕೆಲವು ಬಸ್​ಗಳಲ್ಲಿ ಮಾತ್ರ ಈ ಶಕ್ತಿ ಯೋಜನೆಯು ಅನ್ವಯವಾಗಲಿದೆ.
ಯಾವೆಲ್ಲ ಬಸ್​ಗಳಲ್ಲಿ ಉಚಿತ ಪ್ರಯಾಣ?ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣಸರ್ಕಾರದ ಸಾಮಾನ್ಯ ಬಸ್, ಎಕ್ಸ್‌ಪ್ರೆಸ್, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಇರಲಿದೆ.
ಯಾವ್ಯಾವ ಬಸ್‌ಗಳಿಗೆ ಅನ್ವಯಿಸುವುದಿಲ್ಲ:ಎಸಿ, ನಾನ್​ ಎಸಿ ಸ್ಲೀಪರ್​ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲಬಿಎಂಟಿಸಿ ಬಸ್​ಗಳಲ್ಲಿ ಯಾವುದೇ ಸೀಟ್ ಮೀಸಲು ಇರುವುದಿಲ್ಲಅಂತಾರಾಜ್ಯ ಪ್ರಯಾಣಕ್ಕೆ ಉಚಿತ ಸೌಲಭ್ಯ ಇರುವಿದಿಲ್ಲ
KSRTC ಬಸ್‌ನಲ್ಲಿ 50% ರಷ್ಟು ಆಸನ ಪುರುಷರಿಗೆ ಮೀಸಲಾಗಿರುತ್ತೆ. ಇಡೀ ಬಸ್‌ನಲ್ಲಿ ಪೂರ್ಣ ಮಹಿಳೆಯರೇ ಹೋಗುವಂತಿಲ್ಲ, ಜೊತೆಗೆ BMTCಯಲ್ಲಿ ಇನ್ನು ಮುಂದೆ ಮಹಿಳೆಯರಿಗೆ ಪ್ರತ್ಯೇಕ ಸೀಟು ಮೀಸಲಾತಿ ಇರೋದಿಲ್ಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಐನೂರು ಮುಖ ಬೆಲೆಯ 5 ಲಕ್ಷ ರೂ. ಕೊಟ್ರೆ, 2 ಸಾವಿರ ಮುಖ ಬೆಲೆಯ 6 ಲಕ್ಷ ರೂ. ಕೊಡ್ತೇನೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 8 =
Remember me
