ತುಮಕೂರು (ಹುಳಿಯಾರು):ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಸುಳಿವು ನೀಡಿದರು.ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಪಟ್ಟಣ ಪಂಚಾಯತ್ ಚುನಾವಣೆ ಅಂಗವಾಗಿ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ ನಂತರ ಇಂದು ಸುದ್ದಿಗಾರರ ಜತೆ ಮಾತನಾಡಿ ನೀಡಿದ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ಬಗ್ಗೆ ಊಹಾಪೋಹ ಹರಿದಾಡುತ್ತಿರುವ ಸಂದರ್ಭದಲ್ಲಿ ಅವರ ಆಪ್ತ ವಲಯದಲ್ಲಿರುವ ರಾಜಣ್ಣ ನೀಡಿರುವ ಹೇಳಿಕೆ ಮಹತ್ವ ಪಡೆದಿದೆ.
ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಹುಳಿಯಾರು ಪಟ್ಟಣ ಪಂಚಾಯತ್​ ಚುನಾವಣೆ ದಿಕ್ಸೂಚಿಯಾಗಲಿದ್ದು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಹೋರಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ದುರಾಡಳಿತದಿಂದ ಜನಸಾಮಾನ್ಯರ ದಿನಬಳಕೆ ವಸ್ತುಗಳು, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿವೆ, ಬಿಜೆಪಿಗೆ ಪಾಠ ಕಲಿಸಲು ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಅವರು ಹೇಳಿದರು.
ಚಲಿಸುತ್ತಿದ್ದ ಬೈಕ್​ನಲ್ಲಿ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆದ ಸದ್ದು, ಬೆಚ್ಚಿ ಬಿದ್ದ ಜನರು; ಆಗಿದ್ದಾದರೂ ಏನು?

ಕೆಮಿಕಲ್ ಸೋರಿಕೆಯಿಂದಾಗಿ ಕಾರ್ಮಿಕರೊಬ್ಬರ ಸಾವು; ಮೂವರ ಪರಿಸ್ಥಿತಿ ಗಂಭೀರ…

ಸಿಡಿ ಲೇಡಿಯ ಆಡಿಯೋ ವೈರಲ್: ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + seventeen =
Remember me
