ಬೆಂಗಳೂರು:ನಮ್ಮ ಅಕ್ಕಿ ಬಳಸಿಕೊಂಡು ಜನತೆಗೆ ಬಿಜೆಪಿ ಮಂತ್ರಾಕ್ಷತೆ ಹಂಚುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಇವರ ಅಕ್ಕಿ ಎಂದರೆ ದೊಡ್ಡ ಆಲದಹಳ್ಳಿಯ ಅವರ ತೋಟದಲ್ಲಿ ಬೆಳೆದಿರುವುದಾ? ಎಂದು ಟಾಂಗ್ ಕೊಟ್ಟರು.
ಜೆ.ಪಿ. ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜಕೀಯ ಮಾಡುತ್ತಿರುವುದು ಅವರು. ಇವರು ಅಕ್ಕಿಯನ್ನು ತಮ್ಮ ಸ್ವಗ್ರಾಮ ದೊಡ್ಡ ಆಲದಹಳ್ಳಿಯಲ್ಲಿ ಬೆಳೆದು ಕಳಿಸಿ ಕೊಟ್ಟಿದ್ದಾರೆಯೇ? ಎಂದು ವಾಗ್ದಾಳಿ ನಡೆಸಿದರು.
ರಾಮ ಮಂದಿರಕ್ಕೆ ನಮಗೆ ಆಹ್ವಾನ ನೀಡಿಲ್ಲ ಎಂದು ದೂರಿರುವ ಡಿಕೆಶಿ ಆರೋಪದ ಬಗ್ಗೆ ಪ್ರತ್ಯುತ್ತರ ನೀಡಿದ ಅವರು, ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕರೆಯಬೇಕಾ ಅವರನ್ನು? ಪ್ರಧಾನಿಗಳು ಈಗಾಗಲೇ ಹೇಳಿದ್ದಾರೆ. ಉದ್ಘಾಟನೆ ದಿನ ಗೊಂದಲ ಆಗುವುದು ಬೇಡ. ಮುಂದೆ ದೇವಾಲಯವನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಿದಾಗ ಎಲ್ಲರೂ ಶ್ರೀರಾಮ ದೇವರ ದರ್ಶನ ಪಡೆಯಬಹುದು. ಆಗ ಯಾರು ಬೇಕಾದರೂ ಹೋಗಬಹುದು. ಅದಕ್ಕೇನು ಪರ್ಮಿಷನ್ ಬೇಕಾ? ಎಂದು ಕುಮಾರಸ್ವಾಮಿ ಚಾಟಿ ಬೀಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − 1 =
Remember me
