ಬೆಂಗಳೂರು: ಪ್ರಧಾನ ಮಂತ್ರಿ ಜನಔಷಧ ಕೇಂದ್ರ ಯೋಜನೆಯಡಿ ಹುಬ್ಬಳ್ಳಿಯಲ್ಲಿ ಹೊಸದಾಗಿ ಆರಂಭವಾಗುವ ಜನರಿಕ್ ಔಷಧಗಳ ವಿತರಣಾ ಕೇಂದ್ರವನ್ನು ಶುಕ್ರವಾರ (ನ.6) ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ತಿಳಿಸಿದ್ದಾರೆ.
ಮಾರಾಟ ಮಹಾಮಂಡಳದ ಕೇಂದ್ರ ಕಚೇರಿಯಲ್ಲಿ ಬುಧವಾರ ನಡೆದ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರಾಟ ಮಹಾಮಂಡಳ ವತಿಯಿಂದ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಜನರಿಕ್ ಔಷಧ ಸಗಟು ಹಾಗೂ ಚಿಲ್ಲರೆ ಮಾರಾಟ ಮಳಿಗೆ ಆರಂಭಿಸಲಾಗುತ್ತಿದೆ. ಆದ್ದರಿಂದ, ಜನರಿಕ್ ಔಷಧಗಳ ಸಗಟು ವಿತರಣೆಗಾಗಿ ಹುಬ್ಬಳ್ಳಿಯಲ್ಲಿ ಪ್ರಾಂತೀಯ ಕಚೇರಿ ಪ್ರಾರಂಭಿಸಲಾಗುತ್ತಿದೆ. ಅಲ್ಲದೆ, ಕೇರಳ ಹಾಗೂ ತಮಿಳುನಾಡಿನಲ್ಲಿ ಜನರಿಕ್ ಔಷಧ ಮಾರಾಟ ಮಳಿಗೆ ಆರಂಭಿಸಲು ಕೇಂದ್ರ ಸರ್ಕಾರವು ಶೀಘ್ರ ಏಜೆನ್ಸಿ ನೀಡಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಸಹಕಾರ ಸಂಘಗಳ ನಿಬಂಧಕರು ಎಸ್. ಜಿಯಾವುಲ್ಲಾ ಉಪಸ್ಥಿತಿರಲಿದ್ದಾರೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 17 =
Remember me
