ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶುಕ್ರವಾರ ಅಧಿಕೃತವಾಗಿ ಜಾರಿ ಮಾಡಿದೆ.
ಕಾಂಗ್ರೆಸ್​ ಗ್ಯಾರಂಟಿಗಳ ಕುರಿತು ಬಿಜೆಪಿ ನಾಯಕರು ಚುನಾವಣೆಗೂ ಮುನ್ನ ಹಾಗೂ ಫಲಿತಾಂಶ ಬಂದ ನಂತರ ಸರಣಿ ಟೀಕೆಗಳನ್ನು ಮಾಡುವ ಮೂಲಕ ಅಪಹಾಸ್ಯ ಮಾಡಿದ್ದರು. ಇದೀಗ ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​ ಘಟಕ ಸರಣಿ ಟ್ವೀಟ್​ ಮಾಡುವ ಮೂಲಕ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿದೆ.
ಇದನ್ನೂ ಓದಿ:ಮಂಗಳೂರಿನಲ್ಲಿ ನೈತಿಕ ಪೊಲೀಸ್​ಗಿರಿ; ಐವರು ಆರೋಪಿಗಳು ಅರೆಸ್ಟ್​
ನಳಿನ್​ ಕುಮಾರ್​ ಕಟೀಲ್​ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ, ಬಸವರಾಜ್​ ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ, ಶೋಭಾ ಕರಂದ್ಲಾಜೆ ಅವರೇ ನಿಮಗೂ ಪ್ರಯಾಣ ಫ್ರೀ, ಸಿ.ಟಿ. ರವಿ ಅವರೇ ನಿಮ್ಮ ಮನೆಯವರಿಗೂ ₹2000 ಫ್ರೀ, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ) ಎಂದು ಟ್ವೀಟ್​ ಮಾಡುವ ಮೂಲಕ ಕುಟುಕಿದೆ.
ನಾವು ನುಡಿದಂತೆ ನಡೆಯುವವರು, ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ, ಎಂದು ರಾಜ್ಯ ಕಾಂಗ್ರೆಸ್​ ಘಟಕ ಸರಣಿ ಟ್ವೀಟ್​ ಮಾಡುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
