ಬೆಂಗಳೂರು:ಹಗರಣದ ಕಡೆ ನಾವು ಬೆರಳು ತೋರಿಸಿದಾಗ ಸಾಕ್ಷಿ ಎಲ್ಲಿದೆ, ತನಿಖೆಯಾಗಲಿ ಎನ್ನುವ ಬಿಜೆಪಿಗರು ತನಿಖೆಗೆ ವಹಿಸಿದಾಕ್ಷಣ ದ್ವೇಷ ರಾಜಕಾರಣ ಎಂದು ಚೀರಾಡುತ್ತಾರೆ. ಬಿಜೆಪಿಗರು ಸತ್ಯ ಹರಿಶ್ಚಂದ್ರನ ಮರಿ ಮರಿ ಮೊಮ್ಮಕ್ಕಳಾಗಿದ್ದರೆ ಆತಂಕಪಡುವುದೇಕೆ ಎಂದು ರಾಜ್ಯ ಕಾಂಗ್ರೆಸ್​ ಪ್ರಶ್ನಿಸಿದೆ.
ಬಿಜೆಪಿ ಸರ್ಕಾರದಲ್ಲಿ ನಾನು ಸಚಿವನಾಗಿದ್ದ ಸಮಯದಲ್ಲಿ ಯಾವ ತಪ್ಪನ್ನೂ ಮಾಡಿಲ್ಲ. ತನಿಖೆಗೆ ಆದೇಶಿಸುವ ಮೂಲಕ ಸರ್ಕಾರ​ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಡಾ.ಕೆ. ಸುಧಾಕರ್​ ಆರೋಪಕ್ಕೆ ಕಾಂಗ್ರೆಸ್​ ತಿರುಗೇಟು ನೀಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್​ ಕೋವಿಡ್ ಹಗರಣವನ್ನು ತನಿಖೆಗೆ ವಹಿಸಿದರೆ ಸುಧಾಕರ್​ ಅವರು ಮೈಮೇಲೆ ಚೇಳು ಬಿದ್ದಂತೆ ಹೌಹಾರುತ್ತಿರುವುದೇಕೆ. ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದರೆ ಕುಂಬಳಕಾಯಿಯ ಕಳ್ಳರು ಇವರೇ ಎಂದರ್ಥವಲ್ಲವೇ ಎಂದು ಛೇಡಿಸಿದೆ.
ಇದನ್ನೂ ಓದಿ:ದೂರು ದಾಖಲಿಸಿದವನ ಮೇಲೆ 14 ಜನ ದಾಳಿ ಮಾಡಿ ಕೊಂದರು
ಹಗರಣವೊಂದನ್ನು ತನಿಖೆಗೆ ವಹಿಸುವುದು ದ್ವೇಷ ರಾಜಕಾರಣ ಹೇಗಾಗುತ್ತದೆ ಸುಧಾಕರ್ ಅವರೇ. ಹಗರಣದ ಕಡೆ ನಾವು ಬೆರಳು ತೋರಿಸಿದಾಗ ಸಾಕ್ಷಿ ಎಲ್ಲಿದೆ, ತನಿಖೆಯಾಗಲಿ ಎನ್ನುವ ಬಿಜೆಪಿಗರು ತನಿಖೆಗೆ ವಹಿಸಿದಾಕ್ಷಣ ದ್ವೇಷ ರಾಜಕಾರಣ ಎಂದು ಚೀರಾಡುತ್ತಾರೆ.
ಬಿಜೆಪಿಗರು ಸತ್ಯ ಹರಿಶ್ಚಂದ್ರನ ಮರಿ ಮರಿ ಮೊಮ್ಮಕ್ಕಳಾಗಿದ್ದರೆ ಆತಂಕಪಡುವುದೇಕೆ ಎಂದು ರಾಜ್ಯ ಕಾಂಗ್ರೆಸ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಡಾ. ಸುಧಾಕರ್​​​ ಅವರ ಹೇಳಿಕೆಗೆ ಚಾಟಿ ಬೀಸಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:fifteen − eleven =
Remember me
