ಬೆಂಗಳೂರು: ಗ್ರಾ. ಪಂ.ಗಳಲ್ಲಿ ಖಾಲಿ ಇರುವ ಪಿಡಿಒ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರ ವ್ಯವಸ್ಥೆ ಮಾಡುವ ವಿಚಾರದಲ್ಲಿ ಹೊರಡಿಸಿದ್ದ ಸುತ್ತೋಲೆಯನ್ನು ಸರ್ಕಾರ ತಿದ್ದುಪಡಿ ಮಾಡಿದೆ.
ಪಿಡಿಒ ಪ್ರಭಾರ ನೇಮಕಕ್ಕೆ ಸಂಬಂಧಿಸಿದ ಸುತ್ತೋಲೆಗಳಲ್ಲಿ ವಿರೋಧಾಭಾಸ ವ್ಯಕ್ತವಾಗಿತ್ತು. ಈ ಕುರಿತು ‘ವಿಜಯವಾಣಿ’ ವರದಿ ಮಾಡಿತ್ತು.
ಡಿ.23, 2014ರ ಸುತ್ತೋಲೆಯನ್ನು ಲಗತ್ತಿಸಿ ಅದರಂತೆ ಗ್ರೇಡ್ 2 ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒ ಹುದ್ದೆ ಖಾಲಿ ಇದ್ದಲ್ಲಿ ಅಂತಹ ಹುದ್ದೆಗೆ ಅದೇ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್ 2 ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನೇ ಪಿಡಿಒ ಹುದ್ದೆಗೆ ಪ್ರಭಾರದಲ್ಲಿರಿಸತಕ್ಕದ್ದು. ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒ ಹುದ್ದೆ ಹಾಗೂ ಗ್ರಾಪಂ ಕಾರ್ಯದರ್ಶಿ ಗ್ರೇಡ್ 2 ಎರಡೂ ಹುದ್ದೆ ಖಾಲಿ ಇದ್ದಲ್ಲಿ ಅಂತಹ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಪಿಡಿಒ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿರುವಂತೆ ತಿಳಿಸಲಾಗಿತ್ತು.
ಆದರೆ ನ.23, 2018 ರಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒ ಹುದ್ದೆ ನಿವೃತ್ತಿ, ಅಮಾನತು, ಇನ್ನಿತರೆ ಕಾರಣಗಳಿಗೆ ತೆರವಾದಲ್ಲಿ ಆ ಗ್ರಾಮ ಪಂಚಾಯಿತಿಯಲ್ಲಿ ಗ್ರೇಡ್ 1 ಕಾರ್ಯದರ್ಶಿ ಪೂರ್ಣಕಾಲಿಕವಾಗಿ ಕಾರ್ಯನಿರ್ವಹಿಸುತ್ತಿದ್ದಲ್ಲಿ ಅವರಿಗೆ ಪ್ರಭಾರ ವಹಿಸಬೇಕು. ಪೂರ್ಣಕಾಲಿಕ ಗ್ರೇಡ್ 1 ಕಾರ್ಯದರ್ಶಿ ಇಲ್ಲದಿದ್ದಲ್ಲಿ ನೆರೆಯ ಗ್ರಾಮ ಪಂಚಾಯಿತಿಯ ಪಿಡಿಒಗೆ ಹೆಚ್ಚುವರಿ ಪ್ರಭಾರ ವಹಿಸಬೇಕು. ಗ್ರೇಡ್ 2 ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳಿಗೆ ಪಿಡಿಒ ಹುದ್ದೆ ಪ್ರಭಾರ ವಹಿಸಬಾರದು ಎಂದು ಸ್ಪಷ್ಟಪಡಿಸಿ ಸುತ್ತೋಲೆ ಹೊರಡಿಸಲಾಗಿತ್ತು. ಈಗ ನ.10,2023 ರಂದು ಹೊರಡಿಸಿರುವ ಸುತ್ತೋಲೆಯನ್ನು ತಿದ್ದುಪಡಿ ಮಾಡಿ, ನ.23,2018ರ ಸುತ್ತೋಲೆ ಅನ್ವಯ ಪ್ರಭಾರ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
