ಬೆಂಗಳೂರು:ರಾಜ್ಯದಲ್ಲಿ ನೇಕಾರರ ಸಮುದಾಯದ 7 ಮಠಗಳ ಸ್ವಾಮೀಜಿಗಳನ್ನು ಒಗ್ಗೂಡಿಸಿ ಒಂದು ನೇಕಾರ ಗುರುಪೀಠ ಸ್ಥಾಪಿಸಲಾಗುವುದು ಎಂದು ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಸೋಮಶೇಖರ್ ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ಆಯೋಜಿಸಲಾಗಿದ್ದ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದಲ್ಲಿ ನೇಕಾರ ಸಮುದಾಯ ಎಲ್ಲೆಡೆ ಹಂಚಿಕೆ ಆಗಿದ್ದು, ಒಟ್ಟು 7 ಮಠಗಳಿವೆ.
ಆದರೆ, ನಮ್ಮ ಮಠಗಳಿಗೆ ಈವರೆಗೆ ಒಬ್ಬ ಮುಖ್ಯಮಂತ್ರಿಯೂ ಭೇಟಿ ನೀಡಿಲ್ಲ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರಲು ನಮ್ಮ ಶಕ್ತಿ ಪ್ರದರ್ಶನ ಮಾಡಬೇಕಿದೆ. ಈ ನಿಟ್ಟಿನಲ್ಲಿ 7 ಮಠಗಳ ಸ್ವಾಮೀಜಿಗಳನ್ನು ಒಪ್ಪಿಸಿ ನೇಕಾರ ಸಮುದಾಯಗಳ ಗುರುಪೀಠವೊಂದನ್ನು ಸ್ಥಾಪಿಸಬೇಕಿದೆ. ಈ ಬಗ್ಗೆ ಈಗಾಗಲೆ ಮಠಾಧ್ಯಕ್ಷರ ಬಳಿ ಚರ್ಚೆ ಮಾಡಲಾಗಿದೆ. ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರಿನಲ್ಲಿ ನೇಕಾರರ ಭವನ ಸ್ಥಾಪಿಸುವ ಜವಾಬ್ದಾರಿಯನ್ನು ಮಾಜಿ ಮೇಯರ್ ಹರೀಶ್ ಅವರಿಗೆ ವಹಿಸಲಾಗುತ್ತಿದೆ. ನೇಕಾರರ ಅಭಿವೃದ್ಧಿ ನಿಗಮ ಸ್ಥಾಪಿಸುವ ಬಗ್ಗೆ ಸರ್ಕಾರಕ್ಕೆ ಒಕ್ಕೂಟದಿಂದಲೂ ಒತ್ತಡ ಹೇರಲಾಗುತ್ತದೆ ಎಂದು ಹೇಳಿದರು.
ಜಿಲ್ಲಾವಾರು ಜವಳಿ ಇಲಾಖೆಗಳಿದ್ದು, ನೇಕಾರ ಬಂಧುಗಳಿಗೆ ಇದರ ಸೌಲಭ್ಯಗಳು ಸಿಗುವಂತೆ ಮಾಡಬೇಕು. ಮುಂದಿನ ವರ್ಷಗಳಲ್ಲಿ ಅದ್ದೂರಿಯಾಗಿ ದೇವರ ದಾಸಿಮಯ್ಯ ಜಯಂತಿ ಆಚರಿಸಲು ಎಲ್ಲರನ್ನೂ ಸೇರಿಸಿಕೊಂಡು ಚರ್ಚೆ ಮಾಡಿ ನಂತರ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಚುನಾವಣಾ ಸಂದರ್ಭದಲ್ಲಿ ಮತ ಕೇಳಲು ಹೋದಾಗ ನೇಕಾರ ಬಂಧುಗಳು ಆತ್ಮೀಯತೆಯಿಂದ ನಡೆದುಕೊಂಡಿದ್ದಾರೆ. ರಾಜ್ಯದಲ್ಲಿ ನೇಕಾರರ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವೈಯಕ್ತಿಕವಾಗಿ ಹಾಗೂ ಒಕ್ಕೂಟದ ಪರವಾಗಿ ಒತ್ತಾಯಿಸಲಾಗುವುದು.
|ಉದಯ ಬಿ. ಗರುಡಾಚಾರ್ಶಾಸಕ
20 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಸೂಟ್​ಕೇಸ್​ ರೈಲ್ವೆ ನಿಲ್ದಾಣದಲ್ಲಿ ಅನಾಥ; 2 ಗಂಟೆ ಬಳಿಕ ಗೊತ್ತಾದಾಗ ಶಾಕ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
