ಬೆಂಗಳೂರು:ಆದಾಯ ತೆರಿಗೆ ಇನ್​ಸ್ಪೆಕ್ಟರ್​ವೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಸಮೀಪದ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ.
ಉತ್ತರ ಪ್ರದೇಶ ಮೂಲದ ದೇವೇಂದ್ರ ದುಬೆ (40) ಮೃತರು. ದೇವೇಂದ್ರ ಅವರು ಪತ್ನಿ, ಇಬ್ಬರು ಮಕ್ಕಳ ಜತೆ ಯಶವಂತಪುರ ಎಚ್. ಗುರುಮೂರ್ತಿ ಕಾಲನಿಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಪತ್ನಿ ಜತೆ ಜಗಳ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಜ. 20ರಂದು ಮನೆಯಿಂದ ಹೊರಹೋಗಿದ್ದ ದೇವೇಂದ್ರ, ವಾಪಸ್ ಬಂದಿರಲಿಲ್ಲ. ಗಾಬರಿಗೊಂಡಿದ್ದ ಪತ್ನಿ ಹಾಗೂ ಕುಟುಂಬದವರು, ಹಲವೆಡೆ ಹುಡುಕಾಟ ನಡೆಸಿದ್ದರು. ಯಾವುದೇ ಸುಳಿವು ಸಿಕ್ಕಿರಲಿಲ್ಲ.
ಯಶವಂತಪುರ ಠಾಣೆಗೆ ಜ.23ರಂದು ಪತ್ನಿ ದೂರು ನೀಡಿದ್ದರು. ಅದೇ ದಿನ ಸಂಜೆ ಕೆಎಸ್​ಆರ್ ರೈಲು ನಿಲ್ದಾಣ ಸಮೀಪದ ಹಳಿ ಮೇಲೆ ಮೃತದೇಹ ಪತ್ತೆಯಾಗಿ ಗುರುತಿಸಲು ಸಾಧ್ಯವಾಗದ ಸ್ಥಿತಿಯಲ್ಲಿತ್ತು. ಹೀಗಾಗಿ ನಾಪತ್ತೆ ಪ್ರಕರಣಗಳ ಮೊರೆಹೋದ ಪೊಲೀಸರಿಗೆ ಇದು ದೇವೇಂದ್ರ ದುಬೆ ಮೃತದೇಹವೆಂದು ಶಂಕಿಸಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕುಟುಂಬಸ್ಥರು ಖಚಿತಪಡಿಸಿದ್ದಾರೆ.
ಡೆತ್​ನೋಟ್ ಕಳುಹಿಸಿದರು: ದೇವೇಂದ್ರ ಕೌಟುಂಬಿಕ ವಿಚಾರ ಹಾಗೂ ವೈಯಕ್ತಿಕ ವಿಚಾರಕ್ಕೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಕೆಲ ಅನುಮಾನಗಳಿದ್ದು, ತನಿಖೆ ನಡೆಯಬೇಕಿದೆ. ಇನ್ನು ಜ.20ರಂದು ಪತ್ನಿ ಜತೆ ಜಗಳ ಮಾಡಿದ್ದ ದೇವೇಂದ್ರ, ಅದೇ ದಿನ ಸಂಜೆ 8 ಗಂಟೆ ಸುಮಾರಿಗೆ, ‘ನಾನು ಬದುಕಿರುವುದಿಲ್ಲ. ಸಾಯುತ್ತೇನೆ. ನನ್ನ ಸಾವಿಗೆ ನಾನೇ ಕಾರಣ. ನನ್ನ ಮೃತದೇಹವನ್ನು ಮಕ್ಕಳಿಗೆ ತೋರಿಸಬೇಡಿ’ ಎಂದು ಬರೆದು ಪತ್ನಿಗೆ ವಾಟ್ಸ್​ಆಪ್ ಸಂದೇಶ ಕಳುಹಿಸಿದ್ದರು ಎಂದು ಗೊತ್ತಾಗಿದೆ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಶವಂತಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ರೈಲ್ವೆ ಪೊಲೀಸರು ಪ್ರಕರಣವನ್ನು ಹಸ್ತಾಂತರಿಸಿದ್ದಾರೆ.
ಮಂಡ್ಯದಲ್ಲಿ ಬ್ರಹ್ಮಚಾರಿಗಳ ನಡೆ ಮಹದೇಶ್ವರ ಬೆಟ್ಟದ ಕಡೆ! 30 ವರ್ಷ ದಾಟಿದ್ರೂ ಮದ್ವೆಯಾಗದ ಹಿನ್ನೆಲೆ ದೇವರ ಮೊರೆ

ಬಾರದ ಆಂಬ್ಯುಲೆನ್ಸ್​… ತಂದೆಯನ್ನು ತಳ್ಳುಗಾಡಿಯಲ್ಲಿ ಮಲಗಿಸಿ ಆಸ್ಪತ್ರೆಗೆ ಕರೆದೊಯ್ದ 6 ವರ್ಷದ ಬಾಲಕ

ಟರ್ಕಿಯಲ್ಲಿ ಭೂಕಂಪ ಸಂಭವಿಸಿದ 5 ದಿನದ ಬಳಿಕ ಅವಶೇಷಗಳಡಿ ಸಿಲುಕಿದ್ದ 2 ತಿಂಗಳ ಮಗು ರಕ್ಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 2 =
Remember me
