ಚಿತ್ರದುರ್ಗ:ಕಾವೇರಿದ ಚುನಾವಣೆಯ ವಾತಾವರಣದಲ್ಲಿ ಇರುವ ಜೆಡಿಎಸ್ ಅಭ್ಯರ್ಥಿಯೊಬ್ಬರಿಗೆ ಅದರ ನಡುವೆಯೇ ಆದಾಯ ತೆರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಐಟಿ ಅಧಿಕಾರಿಗಳ ತಂಡ ಅಭ್ಯರ್ಥಿಯ ಮನೆ ಮೇಲೆ ದಾಳಿ ಮಾಡಿದ್ದು, ಅಭ್ಯರ್ಥಿಗಾಗಿ ಕಾಯುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ. ರವೀಂದ್ರಪ್ಪ ಅವರ ಮನೆ ಮೇಲೆ ಈ ದಾಳಿ ನಡೆದಿದೆ. ಆದಾಯ ತೆರಿಗೆ ಅಧಿಕಾರಿಗಳ ಜತೆಗೆ ಚುನಾವಣೆ ಅಧಿಕಾರಿಗಳೂ ರವೀಂದ್ರಪ್ಪ ಮನೆಗೆ ಬಂದಿದ್ದಾರೆ.
ಇದನ್ನೂ ಓದಿ:ಜವರಾಯಿಗೌಡ ಆಸ್ತಿ 206 ಅಲ್ಲ, 350 ಕೋಟಿ ರೂ.; 150 ಕೋಟಿ ರೂ. ಆಸ್ತಿ, ಕ್ರಿಮಿನಲ್ ಕೇಸ್ ವಿವರ ಮುಚ್ಚಿಟ್ಟ ಆರೋಪ
ಸರ್ಕಾರಿ ಸಂಸ್ಥೆಯಲ್ಲಿ ಮುಖ್ಯ ಇಂಜಿನಿಯರ್ ಆಗಿದ್ದ ರವೀಂದ್ರಪ್ಪ, ನಿವೃತ್ತಿ ಬಳಿಕ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ನಂಜಾವಧೂತ ಶ್ರೀಗಳಿಗೆ ಜನ್ಮದಿನದ ಶುಭಾಶಯ ಕೋರಲು ರವೀಂದ್ರಪ್ಪ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಮಠಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಅಧಿಕಾರಿಗಳು ರವೀಂದ್ರಪ್ಪ ಆಗಮನಕ್ಕೆ ಕಾಯುತ್ತಿದ್ದಾರೆ.
ದ್ವಿತೀಯ ಪಿಯುಸಿ ದಾಖಲೆಯ ಫಲಿತಾಂಶ; ದಾಖಲೆಗೆ ಕಾರಣವೇನು? ಈ ಸಲದ ರಿಸಲ್ಟ್​ ವಿಶೇಷಗಳೇನು?

ಗೂಂಡಾ ಕಾಯ್ದೆಯಡಿ ಬಂಧಿತ ಆಪ್ತನ ಮನೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − 6 =
Remember me
