ಬೆಂಗಳೂರು:ಪ್ರಧಾನ ಮಂತ್ರಿ ಅವರ ದೂರದೃಷ್ಟಿಯನ್ನು ಸಾಧಿಸಲು 500 ಕಲ್ಲಿದ್ದಲು ಗಣಿಗಳನ್ನು ಹರಾಜು ಹಾಕುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ವಾಣಿಜ್ಯ ಕಲ್ಲಿದ್ದಲು ಗಣಿಗಳ ಹರಾಜು ಮತ್ತು ಗಣಿಗಾರಿಕೆ ವಲಯದಲ್ಲಿನ ಅವಕಾಶಗಳ ಕುರಿತ ಹೂಡಿಕೆದಾರರ ಸಮಾವೇಶದಲ್ಲಿ ಅವರು ಮಾತನಾಡಿದರು. ಕಲ್ಲಿದ್ದಲು ಮತ್ತು ಗಣಿ ವಲಯಗಳಲ್ಲಿನ ಸರ್ಕಾರದ ಸುಧಾರಣೆಗಳು, ಸುಗಮ ವ್ಯವಹಾರ ನೀತಿಗಳು ಹೂಡಿಕೆದಾರರನ್ನು ಆಕರ್ಷಿಸಿವೆ ಎಂದರು.
ಭಾರತವು ಕಲ್ಲಿದ್ದಲಿನ ಅತಿದೊಡ್ಡ ಸಂಪನ್ಮೂಲ ಹೊಂದಿದೆ. ಅತಿದೊಡ್ಡ ಉತ್ಪಾದಕ ಮತ್ತು ಆಮದುದಾರನಾಗಿದ್ದರೂ, ಹೆಚ್ಚುತ್ತಿರುವ ಇಂಧನ ಭದ್ರತೆ ಅಗತ್ಯಗಳನ್ನು ಪೂರೈಸಲು ಉತ್ಪಾದನೆ ಹೆಚ್ಚಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
1000 ಮಿಲಿಯನ್ ಟನ್ ಉತ್ಪಾದನೆ:2014-15ರಲ್ಲಿ 572 ಮಿಲಿಯನ್ ಟನ್, ಈಗ 870 ಮಿ. ಟನ್ ಉತ್ಪಾದನೆ ಇದೆ. ಈ ವರ್ಷ 900 ಮಿ. ಟನ್ ಕಲ್ಲಿದ್ದಲು ಉತ್ಪಾದನಾ ಗುರಿ ಹೊಂದಲಾಗಿದೆ. ಮುಂದಿನ ವರ್ಷ ಉತ್ಪಾದನೆಯು 1000 ದಶಲಕ್ಷ ಟನ್​ಗಳನ್ನು ಮುಟ್ಟುವ ಅಂದಾಜಿದೆ ಎಂದು ಜೋಶಿ ಹೇಳಿದರು.
ಪ್ರಸ್ತುತ ಕಲ್ಲಿದ್ದಲು ಮತ್ತು ಗಣಿ ವಲಯವು ಒಟ್ಟು ದೇಶೀಯ ಉತ್ಪನ್ನಕ್ಕೆ ಶೇ.0.9 ಕೊಡುಗೆ ನೀಡುತ್ತಿದೆ. ಮುಂಬರುವ ವರ್ಷಗಳಲ್ಲಿ ಇದನ್ನು ಶೇ.2.5ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಹಲವಾರು ಖನಿಜಗಳ ಸಮೃದ್ಧ ಭಂಡಾರವನ್ನು ಕರ್ನಾಟಕ ಹೊಂದಿದೆ. ಹೂಡಿಕೆದಾರರ ಸಮಾವೇಶವು ಕಲ್ಲಿದ್ದಲು ಗಣಿಗಳ ವಾಣಿಜ್ಯ ಹರಾಜಿನಲ್ಲಿ ಭಾಗವಹಿಸುವಿಕೆಯನ್ನು ಇನ್ನಷ್ಟು ಹೆಚ್ಚಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.
ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಅಗತ್ಯ:4-5 ವರ್ಷಗಳಲ್ಲಿ ಕರ್ನಾಟಕ ವಿಶ್ವದ ಅತಿ ದೊಡ್ಡ ಉಕ್ಕು ಉತ್ಪಾದಿಸುವ ರಾಜ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂಧನ, ಗಣಿ ಹಾಗೂ ಉಕ್ಕು ಸಚಿವಾಲಯಗಳು ತಂತ್ರಜ್ಞಾನವನ್ನು ಬಳಕೆ ಮಾಡಬೇಕು ಹಾಗೂ ಬೇಡಿಕೆಯಲ್ಲಿರುವ ಖನಿಜಗಳ ಉತ್ಪಾದನೆಗೆ ತೊಡಗಬೇಕು ಎಂದು ಸಲಹೆ ನೀಡಿದರು.
ಗಣಿ ನಿಯಮಗಳ ಸರಳೀಕರಣ:ಅನೇಕ ಗಣಿ ಕಂಪನಿಗಳು ಕೋಲಾರ ಚಿನ್ನದ ಗಣಿ ಮರು ಆರಂಭಿಸಲು ಮನವಿ ಸಲ್ಲಿಸಿವೆ. ಗಣಿ ನೀತಿಯಲ್ಲಿ ರಾಜ್ಯ ಸರ್ಕಾರ ನಿಯಮಗಳನ್ನು ಸರಳೀಕರಣಗೊಳಿಸಿದೆ. ಗಣಿ ಉದ್ಯಮಿಗಳು ರಾಜ್ಯದಲ್ಲಿ ಗಣಿಗಾರಿಕೆ ನಡೆಸಲು ಆಗಮಿಸಿ ರಾಜ್ಯದ ಆದಾಯವೃದ್ಧಿಗೆ ಕೊಡುಗೆ ನೀಡಬೇಕೆಂದು ಮನವಿ ಮಾಡಿದರು.
ಗಣಿ ದುರ್ಬಳಕೆ ಬೇಡ:ಖನಿಜಗಳ ಅನ್ವೇಷಣೆ ಹೇಗೆ ಎಂಬುದನ್ನು ಆಲೋಚಿಸಬೇಕು. ದುರ್ಬಳಕೆಗೆ ಅವಕಾಶವಿಲ್ಲದಂತೆ ಪರಿಸರ ಸಮತೋಲನ ಕಾಯ್ದುಕೊಳ್ಳಬೇಕು. ಇದನ್ನು ಸಾಧಿಸಿದಾಗ ಸುಸ್ಥಿರತೆ ಸಾಧಿಸಬಹುದು. ವೈಜ್ಞಾನಿಕವಾಗಿ ಗಣಿಗಾರಿಕೆ ಮಾಡದಿದ್ದರೆ, ಉತ್ಪಾದನೆ ಹೆಚ್ಚಿಸಲು ಸಾಧ್ಯವಿಲ್ಲ. ಗುಣಮಟ್ಟವೂ ಇರಲ್ಲ. ಖನಿಜ ಭವಿಷ್ಯಕ್ಕೆ ಉಳಿಯುವುದೂ ಇಲ್ಲ ಸಿಎಂ ಎಚ್ಚರಿಸಿದರು.
ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್, ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿ ಅಮೃತ್​ಲಾಲ್ ಮೀನಾ, ಕಲ್ಲಿದ್ದಲು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಎಂ.ನಾಗರಾಜು, ಗಣಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಸಂಜಯ್ ಲೋಹಿಯಾ ಮತ್ತಿತರರು ಉಪಸ್ಥಿತರಿದ್ದರು.
ಪಂಚಭೂತಗಳಲ್ಲಿ ಭೂಮಿತಾಯಿ ಒಬ್ಬಳು. ಭೂ ತಾಯಿ ಗರ್ಭದಲ್ಲಿ ಮನುಷ್ಯನ ಭವಿಷ್ಯವಿದೆ. ಪಂಚಭೂತಗಳನ್ನು ದೈವ ಸಾಕ್ಷಿಯಾಗಿ ಕಾಣುತ್ತೇವೆ. ಭೂಮಿಯಲ್ಲಿ ದೇವರ ಅಸ್ತಿತ್ವ ಕಾಣುತ್ತೇವೆ. ದೇವರ ಅಸ್ತಿತ್ವ ಮನುಕುಲದ ಒಳಿತಿಗಾಗಿ ಇದೆ. ಅದನ್ನು ಯಾವ ರೀತಿ ಉಪಯೋಗಿಸುತ್ತೇವೆ ಎನ್ನುವುದರ ಮೇಲೆ ಮನುಕುಲದ ಭವಿಷ್ಯ ಅಡಗಿದೆ.
|ಬಸವರಾಜ ಬೊಮ್ಮಾಯಿಸಿಎಂ
141 ಕಲ್ಲಿದ್ದಲು ಗಣಿ ಹರಾಜು:ಕಲ್ಲಿದ್ದಲು ಸಚಿವಾಲಯವು 6ನೇ ಸುತ್ತಿನ ವಾಣಿಜ್ಯ ಹರಾಜಿನ ಅಡಿಯಲ್ಲಿ 133 ಕಲ್ಲಿದ್ದಲು ಗಣಿಗಳ ಹರಾಜು ಮತ್ತು 5ನೇ ಹಂತದ ವಾಣಿಜ್ಯ ಹರಾಜಿನ 2ನೇ ಪ್ರಯತ್ನದಡಿ 8 ಗಣಿಗಳ ಹರಾಜು ಪ್ರಕ್ರಿಯೆ ಪ್ರಾರಂಭಿಸಿದೆ. ಈ 141 ಗಣಿಗಳು ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಬಿಹಾರ, ಛತ್ತೀಸ್​ಗಡ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿವೆ ಎಂದು ಪ್ರಲ್ಹಾದ ಜೋಶಿ ತಿಳಿಸಿದರು.
ರಾಜ್ಯ ಸಮೃದ್ಧ ಗಣಿ ಮೂಲಗಳ ಆಗರ:ಸಮೃದ್ಧ ಗಣಿಮೂಲಗಳನ್ನು ಹೊಂದಿರುವ ರಾಜ್ಯ ನಮ್ಮದು. ಚಿನ್ನ, ಬ್ರೋಮೈಡ್, ನಿಕಲ್ ಮುಂತಾದ ಖನಿಜಗಳನ್ನು ಹೊಂದಿದೆ. ನಾವು ಉತ್ತಮ ಗಣಿ ನೀತಿ ಹೊಂದಿದ್ದೇವೆ. ಸರ್ಕಾರ ಹೂಡಿಕೆದಾರರ ಜತೆಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲಲಿದೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು. ಕಬ್ಬಿಣ ಮತ್ತು ಉಕ್ಕಿನ ಗಣಿಗಾರಿಕೆ ವಿಚಾರದಲ್ಲಿ ಸುಪ್ರಿಂ ಕೋರ್ಟ್ ಕೆಲವು ಮಾರ್ಗಸೂಚಿಗಳನ್ನು ನೀಡಿದ್ದು, ಅದರಂತೆ ಗಣಿಗಾರಿಕೆ ನಡೆಸಲು ಅವಕಾಶ ನೀಡಲಾಗುತ್ತಿದೆ. ಹರಾಜು ಪ್ರಕ್ರಿಯೆಯನ್ನು ದಕ್ಷ ಹಾಗೂ ಪಾರದರ್ಶಕವಾಗಿ ಕೈಗೊಳ್ಳಲು ಸೂಚಿಸಲಾಗಿದೆ. ಹರಾಜು ಪ್ರಕ್ರಿಯೆಯನ್ನು ದೊಡ್ಡ ಮಟ್ಟದಲ್ಲಿ ಕೈಗೊಳ್ಳುವ ಭರವಸೆ ಇದೆ. 16 ಬ್ಲಾಕ್ ಹರಾಜು ಪ್ರಕ್ರಿಯೆ ತಕ್ಷಣದಲ್ಲಿ ಆಗಲಿದ್ದು ಇನ್ನೂ 25 ಬ್ಲಾಕ್​ಗಳ ಹರಾಜು ಕೆಲವೇ ದಿನಗಳಲ್ಲಿ ನಡೆಯಲಿದೆ ಎಂದರು. ಕರ್ನಾಟಕ ಮುಂದಿನ 3 ವರ್ಷದಲ್ಲಿ 2.5 ಲಕ್ಷ ಕೋಟಿ ನವೀಕರಣ ಇಂಧನದಲ್ಲಿ ಹೂಡಿಕೆ ಮಾಡಲಿದೆ ಎಂದು ಹೇಳಿದರು.
ಬೆಂಗಳೂರು:ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಗುಜರಾತ್ ಮಾದರಿ ಅನುಸರಿಸುವುದು ಪಕ್ಷದ ವರಿಷ್ಠರ ವಿವೇಚನೆಗೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಧಿಕಾರವಿದೆ. ಅನುಸರಿಸಬೇಕಾದ ಮಾನದಂಡಗಳನ್ನು ಆ ಸಮಿತಿಯೇ ತೀರ್ವನಿಸುತ್ತದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಜನಸಂಕಲ್ಪ ಯಾತ್ರೆಗೆ ಭರ್ಜರಿ ಸ್ದಂದನೆ ದೊರೆಯುತ್ತಿದೆ. ಎರಡೂ ಮೋರ್ಚಾಗಳ ಸಮಾವೇಶದಲ್ಲಿ ಲಕ್ಷಾಂತರ ಜನರು ನೆರೆದಿದ್ದರು. ಪಕ್ಷದ ಸಂಘಟನಾ ಸಭೆಗಳಲ್ಲಿ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದು ಕಂಡುಬಂದಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಜನರು ಬಯಸಿದ್ದು, 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಸರೆರಚಲು ಪ್ರಯತ್ನ:ಅತ್ಯಂತ ದುರ್ಬಲ ಪ್ರತಿಪಕ್ಷ ಕಾಂಗ್ರೆಸ್ಗೆ ಮಾತನಾಡಲು, ರ್ಚಚಿಸಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ ಎಂದು ಅರುಣ್ ಸಿಂಗ್ ಟೀಕಿಸಿದರು.
ಬೆಂಗಳೂರು:ಮುಂಬರುವ ವಿಧಾನಸಭೆ ಚುನಾವಣೆಗೆ ಪೂರಕವಾಗಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶ ಆಯೋಜಿಸಲು ತೀರ್ವನಿಸಲಾಗಿದೆ ಎಂದು ಪ್ರಕೋಷ್ಠಗಳ ರಾಜ್ಯ ಸಂಯೋಜಕ, ವಿಧಾನಪರಿಷತ್ ಸದಸ್ಯ ಎಂ.ಬಿ.ಭಾನುಪ್ರಕಾಶ್ ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಸಮಾವೇಶದ ಪೂರ್ವಸಿದ್ಧತೆಗಾಗಿ ಶನಿವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಡಿ.18ಕ್ಕೆ ಈ ಸಮಾವೇಶ ನಡೆಯಲಿದೆ. 25 ಸಾವಿರ ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.
ಜವಾಬ್ದಾರಿ ನಿಗದಿ:ವಿವಿಧ ವೃತ್ತಿಗಳಲ್ಲಿ ತೊಡಗಿಕೊಂಡವರು ಪ್ರಕೋಷ್ಠಗಳ ಸದಸ್ಯರಾಗಿದ್ದು, ಪ್ರತಿಯೊಬ್ಬರಿಗೂ ನಿರ್ದಿಷ್ಟ ಕರೆ ಹೋಗಲಿದೆ. ನಿರೀಕ್ಷೆಯಂತೆ ಪಾಲ್ಗೊಂಡ ಸದಸ್ಯ ಬಲದ ಮೇಲೆ ಪ್ರತಿಯೊಬ್ಬರಿಗೂ ಒಂದು ಬೂತ್ ಜವಾಬ್ದಾರಿ ನಿಗದಿ ಮಾಡುವುದು ಸಮಾವೇಶದ ಮುಖ್ಯ ಉದ್ದೇಶ. ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಪ್ರತಿ ಬೂತ್​ನಲ್ಲಿ ಶೇ.50ಕ್ಕೆ ಹೆಚ್ಚು ಮತಗಳು ಬಿಜೆಪಿಗೆ ಬರುವಂತೆ ನೋಡಿಕೊಳ್ಳುವುದು ಈ ಸದಸ್ಯರ ಜವಾಬ್ದಾರಿಯಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷರ ಸಲಹೆ ಪ್ರಕಾರ ಮತ್ತಷ್ಟು ಕೆಲಸಗಳನ್ನು ನಿರ್ವಹಿಸಲು ಪ್ರಕೋಷ್ಠಗಳು ಸನ್ನದ್ಧವಾಗಿರಬೇಕು. ರಾಜಕೀಯ ಕ್ಷೇತ್ರದಲ್ಲಿ ಬದಲಾವಣೆ ತರುವುದಕ್ಕೆ ಪ್ರಕೋಷ್ಠಗಳು ಸಾಧನ. ಸರ್ಕಾರ ಮತ್ತು ಸಂಘಟನೆ ಜಂಟಿಯಾಗಿ ಸಮಾಜದಲ್ಲಿ ಪರಿವರ್ತನೆ ತರಬೇಕಾಗಿದೆ ಎಂದು ಭಾನುಪ್ರಕಾಶ್ ಹೇಳಿದರು.
ರೈಲ್ವೆ ಸಚಿವರಿಂದ ಚಾಲನೆ:ಸಮಾವೇಶವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಲಿದ್ದು, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಮಾರೋಪ ಭಾಷಣ ಮಾಡುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಭಾಗವಹಿಸಲಿದ್ದಾರೆ ಎಂದು ಪ್ರಕೋಷ್ಠಗಳ ರಾಜ್ಯ ಸಹ ಸಂಯೋಜಕ ಡಾ.ಎ.ಎಚ್.ಶಿವಯೋಗಿ ಸ್ವಾಮಿ ತಿಳಿಸಿದರು.
ಐಸಿಯುನಲ್ಲಿ ವೆಂಟಿಲೇಟರ್ ಶಬ್ದದಿಂದ ಕಿರಿಕಿರಿ ಆಗ್ತಿತ್ತು ಅಂತ ಆಫ್ ಮಾಡಿದ ವೃದ್ಧೆ; ಸಾವಿಗೀಡಾದ ರೋಗಿ

ಶ್ರದ್ಧಾ 35 ಪೀಸ್.. ನಾನು ನಿನ್ನನ್ನು 70 ತುಂಡು​ ಮಾಡುವೆ; ಅತ್ಯಾಚಾರ​ ಮಾಡಿ, ಮತಾಂತರಿಸಿ, ಜೊತೆಗಿಟ್ಟುಕೊಂಡವನ ಬೆದರಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − twelve =
Remember me
