ಚಿಕ್ಕಬಳ್ಳಾಪುರ:ಮಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಥಂಡಿ ವಾತಾವರಣ ಮೂಡಿದೆ. ಚಳಿ, ಶೀತಗಾಳಿ ಹೆಚ್ಚಾಗಿರುವ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು(ಡಿ.12) ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜು ರಜೆ ಘೋಷಿಸಿದ್ದಾರೆ.
ಜಿಲ್ಲಾಧಿಕಾರಿ ಎನ್.ಎಂ.ನಾಗರಾಜು ಅವರ ಮೌಖಿಕ ಆದೇಶದ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಪಿಯು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಕೂಡ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಒಂದು ದಿನದ ಮಟ್ಟಿಗೆ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಎ ವಲಯ ಶಿಕ್ಷಕರಿಗಿಲ್ಲ ವರ್ಗಾವಣೆ: ಹೊಸ ಶಿಕ್ಷಕರ ನೇಮಕಾತಿ ಪರಿಣಾಮ; ಕಡ್ಡಾಯ ಟ್ರಾನ್ಸ್​ಫರ್​ಗೂ ಬ್ರೇಕ್

ಹಾಲು ಕರೆಯಲು ಕೊಟ್ಟಿಗೆಗೆ ಹೋದ ಬಾಲಕರಿಬ್ಬರ ಮೇಲೆ ಚಿರತೆ ದಾಳಿ: ಇಂದು ಬೆಳ್ಳಂಬೆಳಗ್ಗೆ ಕೊರಟಗೆರೆಯಲ್ಲಿ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 20 =
Remember me
