|ರುದ್ರಣ್ಣ ಹರ್ತಿಕೋಟೆ ಬೆಂಗಳೂರುಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಎಲ್ಲ ಮೂಲಗಳಿಂದ ಸಂಪನ್ಮೂಲ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಗ್ರಾಮೀಣ ಭಾಗದಲ್ಲಿರುವ ಇನ್ನಷ್ಟು ಭೂಮಿ ಮತ್ತು ಕಟ್ಟಡಗಳನ್ನು ಈ ಮಾಸಾಂತ್ಯದೊಳಗೆ ಕೃಷಿ ತೆರಿಗೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿದೆ. ತನ್ಮೂಲಕ ಗ್ರಾಮ ಪಂಚಾಯಿತಿಗಳ ತೆರಿಗೆ ವ್ಯಾಪ್ತಿ ಹೆಚ್ಚಳಕ್ಕೆ ದಾರಿ ಕಂಡುಕೊಂಡಿದೆ. ಸದ್ಯ ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸಂಗ್ರಹ ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ. ಬಹು ತೇಕ ಜಿಲ್ಲೆಗಳಲ್ಲಿ ನಿಗದಿತ ಪ್ರಮಾಣದಲ್ಲಷ್ಟೇ ತೆರಿಗೆ ಸಂಗ್ರಹವಾಗುತ್ತಿದೆ. ಹಾಗಾಗಿ ತೆರಿಗೆ ವ್ಯಾಪ್ತಿಯನ್ನೇ ವಿಸ್ತರಿಸುವ ಕಡೆ ಸರ್ಕಾರ ಗಮನ ಹರಿಸಿದೆ.
ಗ್ರಾಪಂ ವ್ಯಾಪ್ತಿಯಲ್ಲಿರುವ ಭೂಮಿ ಮತ್ತು ಕಟ್ಟಡಗಳೆಲ್ಲವೂ ತೆರಿಗೆ ವ್ಯಾಪ್ತಿಗೆ ಒಳಪಡುತ್ತಿಲ್ಲ. ಇದರಿಂದ ಸಾಕಷ್ಟು ಪ್ರಮಾಣದ ತೆರಿಗೆ ಸೋರಿಕೆಯಾಗುತ್ತಿದೆ. ಇದನ್ನು ತಡೆಗಟ್ಟಿದರೆ ಗ್ರಾಪಂಗಳ ಆದಾಯ ಹೆಚ್ಚಳವಾಗುತ್ತದೆ ಎಂಬುದು ಸರ್ಕಾರದ ಉದ್ದೇಶ ವಾಗಿದೆ. ಗ್ರಾ. ಪಂ.ಗಳಿಂದ ಸದ್ಯ ಎಲ್ಲ ರೀತಿಯ ತೆರಿಗೆ ಸೇರಿ ಅಂದಾಜು 1,400 ಕೋಟಿ ರೂ.ಗಳಷ್ಟು ಸಂಗ್ರಹವಾಗುತ್ತಿದೆ. ಅದರಲ್ಲಿ ಭೂಮಿ ಮತ್ತು ಕಟ್ಟಡಗಳ ಕೃಷಿ ತೆರಿಗೆ ಸಂಗ್ರಹ 900 ಕೋಟಿ ರೂ. ಆಗಬಹುದೆಂದು ಅಂದಾಜು ಮಾಡಲಾಗಿದೆ. ಎಲ್ಲ ಭೂಮಿ ಮತ್ತು ಕಟ್ಟಡಗಳು ತೆರಿಗೆ ವ್ಯಾಪ್ತಿಗೆ ಒಳಪಟ್ಟರೆ ಅನೇಕ ಗ್ರಾಪಂಗಳು ಸ್ವಂತ ಆದಾಯ ಗಳಿಸಲಿವೆ.

ತೆರಿಗೆ ವ್ಯಾಪ್ತಿಯಿಂದ ಹೊರಗುಳಿದ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರುವುದಕ್ಕೆ ಪ್ರತಿ ಜಿಲ್ಲೆಯಲ್ಲಿ ಅಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿಗಳ ಉಪ ಕಾರ್ಯದರ್ಶಿ (ಅಭಿವೃದ್ಧಿ), ತಾಲೂಕು ಪಂಚಾಯಿತಿಗಳ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೇ ನೇರ ಹೊಣೆಗಾರರಾಗಿರುತ್ತಾರೆ. ಅವರೇನಾದರೂ ನಿರ್ಲಕ್ಷ್ಯ ತೋರಿಸಿದರೆ ಶಿಸ್ತು ಕ್ರಮ ವಿಧಿಸುವ ಎಚ್ಚರಿಕೆಯನ್ನು ಸರ್ಕಾರ ನೀಡಿದೆ. ಹಿಂದೆಲ್ಲ ಸಾಕಷ್ಟು ಗಡುವು ನೀಡಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಗತಿ ಸಾಧ್ಯವಾಗಿಲ್ಲ. ಹಾಗಾಗಿ ಈ ಬಾರಿ ಶಿಸ್ತುಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.
ಕೃಷಿ ನಿರ್ಧರಣೆ ತೆರಿಗೆ ವ್ಯಾಪ್ತಿಗೆ ಒಳಪಡದ ಭೂಮಿ ಮತ್ತು ಕಟ್ಟಡಗಳನ್ನು ಜು.31 ರೊಳಗೆ ಸೇರಿಸಲು ಸೂಚನೆ ನೀಡಲಾಗಿದೆ. ಸುಮಾರು 75 ಲಕ್ಷ ಆಸ್ತಿಗಳು ಹೊಸದಾಗಿ ತೆರಿಗೆ ವ್ಯಾಪ್ತಿಗೆ ಬರುವ ನಿರೀಕ್ಷೆ ಇದೆ. ಈಗ ತೆರಿಗೆ 900 ಕೋಟಿ ರೂ. ಸಂಗ್ರಹವಾಗುತ್ತಿದೆ. ಸಮೀಕ್ಷೆ ಮುಗಿದ ನಂತರ ಎಷ್ಟು ಹೆಚ್ಚಳವಾಗಲಿದೆ ಎಂಬ ಅಂದಾಜು ಸಿಗಲಿದೆ.
| ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪಂಚಾಯತ್​ರಾಜ್, ಆರ್​ಡಿಪಿಆರ್ ಆಯುಕ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 9 =
Remember me
