ಬೆಂಗಳೂರು:ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದಿರುವ ರಾಜ್ಯ ಸರ್ಕಾರ, ಸದ್ಯ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ನಿರ್ಧರಿಸಿದೆ. ಈ ಆದೇಶ ಮುಂದಿನ ತಿಂಗಳು ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವೇತನ ಹೆಚ್ಚಳದ ನೂತನ ಅದೇಶದಿಂದ ಸದ್ಯ ಸರ್ಕಾರದ ಬೊಕ್ಕಸಕ್ಕೆ 6,000 ಕೋಟಿ ರೂ.ಗಳನ್ನು ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಈ ಬಾರಿಯ ಬಜೆಟ್​ನಲ್ಲಿ ಸರ್ಕಾರಿ ನೌಕರರ ಹೆಚ್ಚುವರಿ ವೇತನಕ್ಕೆ 6 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಆದರೆ ನೂತನ ಆದೇಶದಿಂದ ಸರ್ಕಾರ ವಾರ್ಷಿಕ 10,800 ಕೋಟಿ ರೂ. ಮೀಸಲಿಡಬೇಕಾಗಿದೆ. ಇದು ಸರ್ಕಾರದ ಅಂದಾಜಿಗಿಂತ 4,800 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಇನ್ನು ಮುಂದೆ ಪ್ರತಿ ತಿಂಗಳು ಸರ್ಕಾರಿ ನೌಕರರಿಗೆ ವೇತನ ನೀಡಲು 900 ಕೋಟಿ ರೂ. ಹೆಚ್ಚುವರಿಯಾಗಿ ಮೊತ್ತ ಬರಿಸಬೇಕಾಗಿದೆ.
7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದ್ದು, ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದರು. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲು ನಿರ್ಧರಿಸಿದ್ದರು. ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದ್ದು, 17 ಶೇಕಡಾ ವೇತನ ಹೆಚ್ಚಳಕ್ಕೆ ನಿರ್ಧರಿಸಿದ್ದಾರೆ.
ಇದನ್ನೂ ಓದಿ:Success Story | ನಾನು UPSC ಪರೀಕ್ಷೆ ಬರೆದಾಗ 9 ತಿಂಗಳ ಗರ್ಭಿಣಿ; ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
