ಬೆಂಗಳೂರು:ಕೇಂದ್ರ ಸರ್ಕಾರ ಒಂದು ದೇಶ ಒಂದು ತೆರಿಗೆ ಪದ್ಧತಿ ಜಾರಿಗೊಳಿಸಿದರೆ ರಾಜ್ಯಕ್ಕೆ ವಾರ್ಷಿಕ ಒಂದು ಸಾವಿರ ಕೋಟಿ ತೆರಿಗೆ ಸಂಗ್ರಹಣೆ ಕಡಿಮೆಯಾಗಬಹುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನದಲ್ಲಿ ಈ ಕುರಿತು ಚರ್ಚೆ ನಡೆಸುವುದಾಗಿ ತಿಳಿಸಿದರು.
ಹಾಲಿ ಮೂರು ಸ್ಲ್ಯಾಬ್​ಗಳಲ್ಲಿ ರಾಜ್ಯ ಸರ್ಕಾರ ತೆರಿಗೆ ವಿಧಿಸುತ್ತಿದ್ದು, ಶೇ.16, ಶೇ.18, ಶೇ.20ರಂತೆ ತೆರಿಗೆ ಸಂಗ್ರಹಿಸಲಾಗುತ್ತಿದೆ. ಕೇಂದ್ರ ಸರ್ಕಾರ ಶೇ.8, ಶೇ.12, ಶೇ.10ರಂತೆ ತೆರಿಗೆ ಹಾಕುತ್ತಿದೆ ಎಂದರು.
ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ನೌಕರರ ಮುಷ್ಕರ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಚಾಲಕರು ಮತ್ತು ನಿರ್ವಾಹಕರು ಅವರನ್ನೂ ಸರ್ಕಾರಿ ನೌಕರರು ಅಂತ ಪರಿಗಣಿಸಲು ಒತ್ತಾಯಿಸಿದ್ದಾರೆ. ಈ ಕುರಿತು ಪರಿಶೀಲಿಸಲು ಸಮಿತಿ ರಚಿಸಲು ಸಿಎಂ ಸೂಚನೆ ನೀಡಿದ್ದಾರೆ.
ಬೇರೆ ನಿಗಮಗಳೂ ಬೇಡಿಕೆ ಇಡುವ ಸಾಧ್ಯತೆ ಇರುವುದರಿಂದ ಇದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದರು. ಎಲೆಕ್ಟ್ರಿಕಲ್ ಬಸ್ ನೀಡಲು ಹಂಗೆರಿ ಕಂಪೆನಿ ಮುಂದೆ ಬಂದಿದೆ. ಟೆಂಡರ್ ಕರೆಯದೇ ಈ ಬಸ್ ಬಳಸಿಕೊಳ್ಳಲು ಬರಲ್ಲ. ಆದರೆ ಟೆಂಡರ್​ಗೆ ಕಂಪನಿ ಒಪ್ಪುತ್ತಿಲ್ಲ ಹೀಗಾಗಿ ಚರ್ಚೆ ನಡೆಯುತ್ತಿದೆ. ದಿನದ ಬಾಡಿಗೆ ಲೆಕ್ಕದಲ್ಲಿ ಅಥವಾ ಲಾಭದ ಹಂಚಿಕೆ ಲೆಕ್ಕದಲ್ಲಿ ಬಸ್ ಬಳಸಿಕೊಳ್ಳಬಹುದು. ಬಂಡವಾಳ ಇಲ್ಲದೇ ಬಸ್​ಗಳು ನಮಗೆ ಸಿಗಲಿವೆ ಎಂದು ಸವದಿ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + fourteen =
Remember me
