ಬೆಂಗಳೂರು:ಸರ್ಕಾರಿ ಜಾರಿಗೆ ತಂದ ಗ್ಯಾರಂಟಿ ಯೋಜನೆಯಿಂದ ಸಾರಿಗೆ ನಿಗಮಗಳಲ್ಲಿ ಪುರುಷ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಮುಖ್ಯಮಂತ್ರಿ ಬಳಿ ಹಂಚಿಕೊಂಡಿದ್ದಾರೆ.ರಾಜ್ಯದೊಳಗೆ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಶಕ್ತಿ ಯೋಜನೆ ಬಗ್ಗೆ ಸಾಕಷ್ಟು ಪರ ವಿರೋಧ ವ್ಯಕ್ತವಾಗಿದೆ. ಈ ಯೋಜನೆ ಜಾರಿಯಾದ ಬಳಿಕ ಮಹಿಳೆಯರ ಪ್ರಯಾಣ ಹೆಚ್ಚಾಗಿದೆ ಎಂಬ ವಾದವೂ ಇದೆ.ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಕ್ತಿ ಯೋಜನೆಯಿಂದಾಗಿ ಪುರುಷ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿ ಯೋಜನೆ ಯಶಸ್ವಿ ಆಗಿದೆ ಎನ್ನುವ ಮಾಹಿತಿ ಅಧಿಕಾರಿಗಳಿಂದ ಪಡೆದು ಅದಕ್ಕೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು. ಜತೆಗೆ ಹೊಸ ಬಸ್ ಗಳ ಖರೀದಿ ಬಳಿಕ ಹೊಸ ಚಾಲಕರು ಮತ್ತು ನಿರ್ವಾಹಕರ ಅಗತ್ಯ ಬೀಳುತ್ತದೆ. ಅವರ ನೇಮಕದ ಕುರಿತು ಪ್ರತ್ಯೇಕ ಸಭೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.ಇತ್ತೀಚೆಗೆ ಖಾಸಗಿ ಬಸ್​ಗಳಲ್ಲಿ ಪ್ರಯಾಣಿಕ ಸಂಖ್ಯೆ ಕಡಿಮೆಯಾಗಿದ್ದು, ನಷ್ಟವಾಗುತ್ತಿದೆ ನಮಗೂ ಶಕ್ತಿ ಯೋಜನೆ ವಿಸ್ತರಿಸಿದ ಎಂದು ಖಾಸಗಿ ಬಸ್​ ಮಾಲಿಕರು ಪ್ರತಿಭಟಿಸಿದ್ದರು ಮತ್ತು ಬೆಂಗಳೂರು ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 + eighteen =
Remember me
