ಬೆಂಗಳೂರು:ಪರಿಶಿಷ್ಟರಿಗೆ ಗುತ್ತಿಗೆ ಮೀಸಲು 2 ಕೋಟಿ ರೂ.ಗಳಿಗೆ ಹೆಚ್ಚಿಸಲು ಮುಂದಿನ ಅಧಿವೇಶದನಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ.
ರಾಜ್ಯ ಎಸ್ಸಿ/ಎಸ್ಟಿ ಗುತ್ತಿಗೆದಾರರ ಸಂಘದೊಂದಿಗೆ ವಿಕಾಸಸೌಧದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, 1 ಕೋಟಿ ರೂ.ಗಳಿಂದ 2 ಕೋಟಿ ರೂ.ಗೆ ಹೆಚ್ಚಿಸಲು ಈಗಾಗಲೇ ಮುಖ್ಯಮಂತ್ರಿಗಳು ಒಪ್ಪಿದ್ದು, ಇಲಾಖೆಯಿಂದ ಶಿಾರಸು ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ಎಲ್‌ಒಸಿ ಬಿಡುಗಡೆ ಸಂದರ್ಭದಲ್ಲೂ ಮೀಸಲಾತಿ ಅನ್ವಯಿಸಲು ಹಾಗೂ ಕೆಆರ್‌ಡಿಎಲ್, ನಿರ್ಮಿತಿ ಕೇಂದ್ರ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದ ಸಂದರ್ಭದಲ್ಲಿಯೇ ಕಾಮಗಾರಿ ಮೊತ್ತದ ಶೇ. 30ರಷ್ಟು ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಆ ವ್ಯವಸ್ಥೆಯನ್ನು ಎಸ್ಸಿ/ಎಸ್ಟಿ ಗುತ್ತಿಗೆದಾರರಿಗೂ ಅನ್ವಯವಾಗುವಂತೆ ಮಾಡಬೇಕು ಎಂಬ ಬೇಡಿಕೆಗೆ, ಈ ಬಗ್ಗೆ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.
ಲೋಕೋಪಯೋಗಿ ಇಲಾಖೆ ಅಡಿಯಲ್ಲಿ ಅನುಷ್ಠಾನಗೊಳಿಸಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ 1,500 ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಳ್ಳಲಾಗಿದೆ. ಅದನ್ನು ಶೀಘ್ರದಲ್ಲಿ ಪಾವತಿಸಬೇಕು ಎಂದು ಸಂಘದ ಪ್ರತಿನಿಧಿಗಳು ಒತ್ತಾಯಕ್ಕೆ ಸ್ಪಂದಿಸಿದ ಸಚಿವರು, ಕಾಮಗಾರಿಗಳ ಬಾಕಿ ಬಿಲ್‌ನ್ನು ಅಕ್ಟೋಬರ್ ಅಂತ್ಯದೊಳಗೆ ಪಾವತಿಸಲಾಗುವುದು ಎಂದು ಹೇಳಿದರು.
ಸಣ್ಣ ಸಣ್ಣ ಕಾಮಗಾರಿಗಳನ್ನು ಒಟ್ಟುಗೂಡಿಸಿ ಪ್ಯಾಕೇಜ್ ಮಾದರಿಯಲ್ಲಿ ಟೆಂಡರ್ ಕರೆಯಲಾಗುತ್ತಿದೆ. ಅದರಿಂದ ಸಣ್ಣ ಗುತ್ತಿಗೆದಾರರಿಗೆ ಕೆಲಸ ಸಿಗುತ್ತಿಲ್ಲ. ಅದನ್ನು ತಡೆಯಬೇಕು ಎಂಬ ಬೇಡಿಕೆಗೆ, ನಿಮ್ಮ ಬೇಡಿಕೆಗಳೆಲ್ಲವನ್ನೂ ಅಧಿಕಾರಿಗಳೊಂದಿಗೆ ಚರ್ಚಿಸಿ ಈಡೇರಿಸಲು ಪ್ರಯತ್ನಿಸುತ್ತೇನೆ. ಅದರಲ್ಲೂ ಕಾಮಗಾರಿಗೂ ಮುನ್ನವೇ ಹಣ ಬಿಡುಗಡೆಯಂತಹ ಬೇಡಿಕೆಯನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಎಸ್ಸಿ/ಎಸ್ಟಿ ಗುತ್ತಿಗೆದಾರರು ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಅವೆಲ್ಲವನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗಿದೆ. ಪ್ರಮುಖವಾಗಿ ಬಿಲ್ ಪಾವತಿ ಬಗ್ಗೆ ತಿಳಿಸಿದ್ದು, ಶೀಘ್ರದಲ್ಲಿ ಅದನ್ನು ಬಿಡುಗಡೆ ಮಾಡುತ್ತೇವೆ. ಉಳಿದ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ದೊರಕಿಸಿಕೊಡಲಾಗುವುದು ಎಂದು ಜಾರಕಿಹೊಳಿ ಪ್ರತಿಕ್ರಿಯಿಸಿದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:2 × five =
Remember me
