ಬೆಂಗಳೂರು:ನಿವಾರ್ ಚಂಡಮಾರುತ ಪ್ರಭಾವದಿಂದಾಗಿ ತಾಪಮಾನದಲ್ಲಿ ಏರಿಳಿತವಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಳವಾಗಿದೆ. ಮೋಡ ಕವಿದ ವಾತಾವರಣ, ಉಷ್ಣಾಂಶದಲ್ಲಿ ಇಳಿಕೆ, ಹೆಚ್ಚುತ್ತಿರುವ ಗಾಳಿ ಆರ್ಭಟ ಈ ಎಲ್ಲ ಪರಿಣಾಮ ವಾತಾವರಣವನ್ನು ಥಂಡಿಗೊಳಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ವಿಜಯಪುರ, ಕಲಬುರಗಿ, ಬೀದರ್, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಸೇರಿ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 5-6 ಡಿಗ್ರಿ ಸೆಲ್ಸಿಯಸ್ ಹಾಗೂ ಬೆಳಗಾವಿ, ಹುಬ್ಬಳ್ಳಿ ಧಾರವಾಡ, ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇಳಿಕೆಯಾಗಿದೆ. ಆದ್ದರಿಂದ, ಈ ಭಾಗಗಳಲ್ಲಿ ಮುಂದಿನ ಎರಡ್ಮೂರು ದಿನ ಚಳಿ ಹೆಚ್ಚಳವಾಗಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಚಳಿಯಿದೆ. ಈ ಭಾಗಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ತುಸು ಏರಿಳಿತವಾಗಿದೆ. ಶೀತ ಗಾಳಿ ಬೀಸುತ್ತಿದ್ದು, ಮುಂದಿನ ಮೂರು ದಿನ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಮಾಹಿತಿ ನೀಡಿದ್ದಾರೆ.
ವಾಯುಭಾರ ಕುಸಿತ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ. ಶನಿವಾರವೂ ರಾಜ್ಯದ ವಿವಿಧೆಡೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಿದೆ. ನ.29ರಿಂದ ಮುಂದಿನ 2 ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮೂನ್ಸೂಚನೆ ನೀಡಿದೆ.
ಎಚ್ಚರ ವಹಿಸಲು ವೈದ್ಯರ ಸಲಹೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + six =
Remember me
