ಬೆಂಗಳೂರು:ಕಾಂಗ್ರೆಸ್ ಸರ್ಕಾರದಲ್ಲಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರತಿಭಟಿಸುವುದನ್ನು ಹತ್ತಿಕ್ಕುವ ಮೂಲಕ ದೌರ್ಜನ್ಯ ಮೆರೆಯಲು ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಳವಳ ವ್ಯಕ್ತಪಡಿಸಿದ್ದಾರೆ.
ಮೈಸೂರು ಮುಡಾ ಹಗರಣದ ಚಳುವಳಿಗಳನ್ನು ಹತ್ತಿಕ್ಕಲು ಇಂಥಾ ಪ್ರಯತ್ನ ನಡೆಸಿದ್ದ ಸರ್ಕಾರ ಇದೀಗ ಕೆ.ಪಿ.ಎಸ್.ಸಿ ಯ ಪರೀಕ್ಷಾರ್ಥಿಗಳಿಗೆ ಅನಾನುಕೂಲ ಉಂಟುಮಾಡುವ ಏಕ ಪಕ್ಷೀಯ ನಿರ್ಧಾರದ ವಿರುದ್ಧ ಹಾಗೂ ಪರೀಕ್ಷಾರ್ಥಿಗಳ ಬಂಧನ ಪ್ರಶ್ನಿಸಿ ಶಾಂತಿಯುತವಾಗಿ ಪ್ರತಿಭಟಿಸಲು ತೆರಳಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಪೊಲೀಸ್ ಕ್ರೌರ್ಯ ಮೆರೆದು ಪ್ರಹಾರ ನಡೆಸಿರುವುದು ಅಮಾನುಷ ವರ್ತನೆಯಾಗಿದೆ.
ರಾಜ್ಯ ಬಿಜೆಪಿ ಇದನ್ನು ಅತ್ಯುಗ್ರವಾಗಿ ಖಂಡಿಸುತ್ತದೆ ಎಂದಿರುವ ಬಿ.ವೈ.ವಿಜಯೇಂದ್ರ, ಸಾಮಾಜಿಕ ಜಾಲ ತಾಣದ ತಮ್ಮ ಖಾತೆಯಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿದ್ದಾರೆ.
ನ್ಯಾಯಯುತ ಹೋರಾಟಗಳನ್ನು ಪೊಲೀಸ್ ವ್ಯವಸ್ಥೆಯ ಮೂಲಕ ಹತ್ತಿಕ್ಕುವ ಸರ್ವಾಧಿಕಾರಿ ಧೋರಣೆಯನ್ನು ರಾಜ್ಯ ಕಾಂಗ್ತೆಸ್ ಮುಂದುವರಿಸಿದರೆ ಜನಾಂದೋಲನದ ಮೂಲಕ ಸರ್ಕಾರಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಅಮಾಯಕ ಯುವ ಕಾರ್ಯಕರ್ತರ ಮೇಲೆ ನಿರ್ದಯವಾಗಿ ಬಲಪ್ರಯೋಗ ಮಾಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಈ ಕೂಡಲೇ ಕ್ರಮ ಜರುಗಿಸಿ ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
