
ಬೆಂಗಳೂರು:ವಿದ್ಯುತ್ ಕೊರತೆ ರಾಜ್ಯದಲ್ಲಿದ್ದರೂ ಬೆಸ್ಕಾಂ ವಲಯದ ಕೈಗಾರಿಕಾ ಪ್ರದೇಶಗಳಿಗೆ ನಿರಂತರ ವಿದ್ಯುತ್ ಪೂರೈಸುವುದಾಗಿ ಬೆಸ್ಕಾಂ ಭರವಸೆ ನೀಡಿದೆ.ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೌರವ ಗುಪ್ತ ಅಧ್ಯಕ್ಷತೆಯಲ್ಲಿ, ಬೆಸ್ಕಾಂ ವಲಯದ ಕೈಗಾರಿಕಾ ಪ್ರತಿನಿಧಿಗಳ ಜೊತೆ ಮಂಗಳವಾರ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ, ಕೈಗಾರಿಕಾ ಘಟಕಗಳ ಪ್ರತಿನಿಧಿಗಳಿಗೆ ಭರವಸೆ ನೀಡಿದ್ದು, ಕೈಗಾರಿಕಾ ವಲಯದ ಪ್ರತಿನಿಧಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.ಯಾವುದೇ ಕಾರಣಕ್ಕೂ ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ, ಹೆಚ್ಚುವರಿ ವಿದ್ಯುತ್ ಖರೀದಿಗೆ ಈಗಾಗಲೇ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಕೈಗಾರಿಕಾ ಘಟಕಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.ಸಭೆಯಲ್ಲಿ ಪೀಣ್ಯ, ಬಿಡದಿ, ಹೊಸಕೋಟೆ, ಇಲೆಕ್ಟ್ರಾನಿಕ್ ಸಿಟಿ, ಕುಂಬಳಗೋಡು, ಮಾಲೂರು, ನೆಲಮಂಗಲ, ದಾಬಸಪೇಟೆ, ದಾವಣಗೆರೆ, ತುಮಕೂರು, ಕೋಲಾರ, ಗೌರಿಬಿದನೂರು, ವೈಟ್ ಫೀಲ್ಡ್ ಮತ್ತು ಹೆರೋಹಳ್ಳಿ ಕೈಗಾರಿಕಾ ವಲಯಗಳ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
