ಬೆಂಗಳೂರು:ಇಡೀ ದೇಶವು 77ನೇ ಸ್ವಾಂತಂತ್ರ್ಯ ಸಂಭ್ರಮದ ಅಲೆಯಲ್ಲಿ ತೇಲುತ್ತಿದೆ. ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ದೇಶದ ಗಣ್ಯರು ಜನತೆ ಶುಭಕೋರಿದ್ದಾರೆ. ಕೆಲವೇ ಗಂಟೆಗಳ ಹಿಂದೆ ಪ್ರಧಾನಿ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನು ಉದ್ದೇಶಿ ಮಾತನಾಡುತ್ತಿದ್ದಾರೆ. ಭಾಷಣದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಇಡೀ ಕಾರ್ಯಕ್ರಮದ ನೇರಪ್ರಸಾರವನ್ನು ಈ ಮೇಲಿನ ದೂರದರ್ಶನ ಚಂದನ ಯೂಟ್ಯೂಬ್​ ಚಾನೆಲ್​ನಲ್ಲಿ ವೀಕ್ಷಣೆ ಮಾಡಬಹುದಾಗಿದೆ.
Sign in to your account
Please enter an answer in digits:12 − 11 =
Remember me
