ನವದೆಹಲಿ:ಪೊಲೀಸ್​ ಇಲಾಖೆಗೆ ಸ್ವಾತಂತ್ರ್ಯೋತ್ಸವದ ನಿಮಿತ್ತ ಪ್ರತಿವರ್ಷ ನೀಡಲಾಗುವ ವಿವಿಧ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 1037 ಸೇವಾ ಪದಕವನ್ನು ಕೇಂದ್ರ ಮತ್ತು ರಾಜ್ಯ ಪೊಲೀಸ್​ ಸಿಬ್ಬಂದಿಗೆ ಘೋಷಣೆ ಮಾಡಲಾಗಿದ್ದು, ಇದರಲ್ಲಿ 208 ಪೊಲೀಸ್​ ಅಧಿಕಾರಿಗಳು ಹಾಗೂ ಸಿಬ್ಬಂದಿ ಶೌರ್ಯ ಪ್ರಶಸ್ತಿಗೆ (Police Medal for Gallantry) ಭಾಜನರಾಗಿದ್ದರೆ.
ಕರ್ನಾಟಕದ ರಾಜ್ಯದ 19 ಪೊಲೀಸ್‌ ಅಧಿಕಾರಿಗಳು ರಾಷ್ಟ್ರಪತಿಯವರು ಪ್ರದಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಐಪಿಎಸ್​ ಅಧಿಕಾರಿ ಚಂದ್ರಶೇಖರ್​ ಎಂ (ಎಡಿಜಿಪಿ, ಐಎಸ್​ಡಿ, ಬೆಂಗಳೂರು) ಅವರು ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಉಳಿದ 18 ಪೊಲೀಸ್​ ಅಧಿಕಾರಿಗಳು ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಅಧಿಕಾರಿಗಳ ವಿವರ ಈ ಕೆಳಕಂಡಂತಿದೆ.
1. ಶ್ರೀನಾಥ್ ಎಂ ಜೋಷಿ, ಎಸ್‌ಪಿ ಲೋಕಾಯುಕ್ತ2. ಸಿ.ಕೆ ಬಾಬಾ, ಎಸ್‌ಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ3. ರಾಮಗೊಂಡ ಬಿ ಬಸರಗಿ, ಎಎಸ್‌ಪಿ, ಬಳ್ಳಾರಿ ಜಿಲ್ಲೆ4. ಎಂ.ಡಿ. ಶರತ್​, ಪೊಲೀಸ್​ ಅಧೀಕ್ಷಕರು, ಸಿಐಡಿ, ಬೆಂಗಳೂರು5. ವಿ.ಸಿ. ಗೋಪಾಲರೆಡ್ಡಿ, ಡಿಸಿಪಿ, ಸಿಆರ್​, ಪಶ್ಚಿಮ, ಬೆಂಗಳೂರು ನಗರ6. ಗಿರಿ ಕೆ.ಸಿ, ಡಿವೈಎಸ್‌ಪಿ, ಚನ್ನಪಟ್ಟಣ ಉಪ-ವಿಭಾಗ, ರಾಮನಗರ ಜಿಲ್ಲೆ7. ಮುರಳೀಧರ್ ಪಿ, ಡಿವೈಎಸ್‌ಪಿ, ಚಿಂತಾಮಣಿ ಉಪ-ವಿಭಾಗ, ಚಿಕ್ಕಬಳ್ಳಾಪುರ ಜಿಲ್ಲೆ8. ಬಸವೇಶ್ವರ, ಅಸಿಸ್ಟೆಂಟ್ ಡೈರೆಕ್ಟರ್, ರಾಜ್ಯ ಗುಪ್ತವಾರ್ತೆ, ಕಲಬುರಗಿ9. ಕೆ. ಬಸವರಾಜು, ಡಿವೈಎಸ್‌ಪಿ, ಐಎಸ್​ಡಿ, ಕಲಬುರಗಿ10. ರವೀಶ್ ನಾಯಕ್, ಎಸಿಪಿ, ಸಿಸಿಆರ್​ಬಿ, ಮಂಗಳೂರು ನಗರ11. ಎನ್​. ಮಹೇಶ್​, ಸಹಾಯಕ ನಿರ್ದೇಶಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರು12. ಪ್ರಭಾಕರ್ ಜಿ, ಎಸಿಪಿ, ಸಂಚಾರ ಯೋಜನೆ, ಬೆಂಗಳೂರು ನಗರ13. ಹರೀಶ್ ಎಚ್.ಆರ್, ಅಸಿಸ್ಟೆಂಟ್ ಕಮಾಂಡೆಂಟ್, 11ನೇ ಪಡೆ, ಕೆಎಸ್​ಆರ್​ಪಿ, ಹಾಸನ14. ಮಂಜುನಾಥ ಎಸ್​. ಕಲ್ಲೆದೇವರ್, ಸಬ್ ಇನ್ಸ್‌ಪೆಕ್ಟರ್, ಎಫ್​ಪಿಬಿ, ದಾವಣಗೆರೆ15. ಎಸ್. ಮಂಜುನಾಥ, ಆರ್​ಪಿಐ, 3ನೇ ಪಡೆ, ಕೆಎಸ್​ಆರ್​ಪಿ, ಬೆಂಗಳೂರು16. ಗೌರಮ್ಮ ಜಿ., ಎಎಸ್ಐ, ಸಿಐಡಿ, ಬೆಂಗಳೂರು17. ಮಹಬೂಬಸಾಹೇಬ ಎನ್​ ಮುಜಾವರ್​, ಸಿಎಚ್​ಸಿ, ಮನಗುಳಿ ಪೊಲೀಸ್​ ಠಾಣೆ, ವಿಜಯಪುರ ಜಿಲ್ಲೆ18. ಬಿ. ವಿಜಯ್ ಕುಮಾರ್, ಹೆಡ್ ಕಾನ್ಸ್‌ಟೇಬಲ್, ಡಿಸಿಆರ್​ಬಿ, ಉಡುಪಿ



ಯುಐ ಚಿತ್ರತಂಡದಿಂದ ಬಂತು ಬಿಗ್​ ಅಪ್​ಡೇಟ್​: ಆ. 16ಕ್ಕೆ ಮಹತ್ವದ ಘೋಷಣೆ, ಏನಿರಬಹುದು ಊಹಿಸಿ?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:two + 11 =
Remember me
