ಬೆಂಗಳೂರು: ಇಂದಿರಾ ಕ್ಯಾಂಟೀನ್ ಬೋಗಸ್ ಬಿಲ್ ಸೃಷ್ಟಿಸಿ ಅವ್ಯವಹಾರ ಎಸಗಿದ್ದಾರೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿದ್ದ ಪ್ರಕರಣ ರದ್ದಾಗಿದೆ.
‘‘ರಾಜಕೀಯ ದುರುದ್ದೇಶದಿಂದ ಈ ದೂರು ನೀಡಲಾಗಿದೆ. ಹೀಗಾಗಿ ಪ್ರಕರಣವನ್ನು ರದ್ದು ಮಾಡಲಾಗಿದೆ’’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಆದೇಶಿಸಿದ್ದಾರೆ.
ಇದನ್ನೂ ಓದಿನಾಲ್ವಡಿ ದಾರಿಯಲ್ಲಿ ಸಾಗೋಣ
‘‘ಕ್ಯಾಂಟೀನ್ ಕಾಮಗಾರಿ ಬಾಕಿ ಉಳಿಸಿಕೊಂಡು ಅನುದಾನ ಬಿಡುಗಡೆ ಮಾಡಿಸಿಕೊಂಡಿರುವುದಕ್ಕೆ ಸಲ್ಲಿಸಿರುವ ಫೋಟೋ ಹಾಗೂ ವಿಡಿಯೋಗಳನ್ನು ಯಾವಾಗ ಸೆರೆ ಹಿಡಿಯಲಾಗಿದೆ ಎಂಬುದರ ಮಾಹಿತಿ ನಿಖರವಾಗಿಲ್ಲ. ಊಟ ವಿತರಣೆಯ ಅವ್ಯವಹಾರಕ್ಕೆ ಸಲ್ಲಿಸಿರುವ ದಾಖಲೆಗಳು ಆರೋಪಕ್ಕೆ ಪೂರಕವಾಗಿಲ್ಲ’’ ಎಂದೂ ಸ್ಪಷ್ಟಪಡಿಸಿದ್ದಾರೆ.
ಗಣೇಶ್ ಸಿಂಗ್ ಎಂಬುವರು ಈ ಕುರಿತು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ‘‘24 ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣವನ್ನು ಖಾಸಗಿ ಕಂಪನಿಗೆ ವಹಿಸಿತ್ತು. ಕಾಮಗಾರಿ ಪೂರ್ಣಗೊಳ್ಳದಿದ್ದರೂ ಕಂಪನಿಗೆ 11.72 ಕೋಟಿ ರೂ. ಮಂಜೂರು ಮಾಡಲಾಗಿದೆ. ಅಲ್ಲದೆ, ಕ್ಯಾಂಟೀನ್‌ಗಳ ವ್ಯವಸ್ಥೆ ಹಾಗೂ ಆಹಾರ ಪೂರೈಕೆಯ ಹೊಣೆ ಹೊತ್ತಿದ್ದ 2 ಗುತ್ತಿಗೆದಾರ ಕಂಪನಿಗಳು, ಪ್ರತಿ ತಿಂಗಳು 27,03,200 ಮಂದಿ ಬೆಳಗ್ಗೆ ಉಪಾಹಾರ, 10,12,150 ಮಂದಿ ಮಧ್ಯಾಹ್ನದ ಊಟ ಹಾಗೂ 5,13,050 ಮಂದಿ ರಾತ್ರಿ ಊಟ ಮಾಡಿದ್ದಾರೆ. ಇದರಿಂದ 2.96 ಕೋಟಿ ರೂ. ಸಂಗ್ರಹವಾಗಿದೆ ಎಂದು ಬಿಬಿಎಂಪಿಗೆ ತಪ್ಪು ಲೆಕ್ಕ ನೀಡಿ ಸಬ್ಸಿಡಿ ಹಣ ಮಂಜೂರು ಮಾಡಿಸಿಕೊಂಡಿವೆ. ಇದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಕೆ.ಜೆ. ಜಾರ್ಜ್ ಶಾಮೀಲಾಗಿದ್ದಾರೆ’’ ಎಂದು ದೂರಿನಲ್ಲಿ ಆರೋಪಿಸಿದ್ದರು.
ರಜನಿಕಾಂತ್‌ಗೆ ಕರೊನಾ ಪಾಸಿಟಿವ್: ಜೋಕ್ ಮಾಡಿ ಬೈಸಿಕೊಂಡ ಹಿಂದಿ ನಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + fourteen =
Remember me
