ಬೆಂಗಳೂರು:ಇಂದ್ರಜಿತ್ ಲಂಕೇಶ್ ಇತ್ತೀಚೆಗೆ ನನ್ನನ್ನು ಭೇಟಿ ಮಾಡಿಲ್ಲ ಎಂದು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಯಾಕೆ ನನ್ನ ಫೋಟೋ ವೈರಲ್ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ದಿನ ನೂರಾರು ಜನ ನನ್ನನ್ನು ಭೇಟಿ ಮಾಡುತ್ತಾರೆ. ನನ್ನ ಜತೆ ಫೋಟೋ ತೆಗೆದುಕೊಳ್ಳುತ್ತಾರೆ. ಯಾಕೆ ನನ್ನ ಹೆಸರು ತಳುಕು ಹಾಕಿದ್ದಾರೋ ಗೊತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಾನು ರಾಜಕಾರಣ ಮಾಡಿದರೆ ನೇರವಾಗಿ ಮಾಡುತ್ತೇನೆ. ನಿನ್ನೆಯಿಂದ ನಡೆಯುತ್ತಿರುವ ಘಟನೆಯ ಬಗ್ಗೆ ಆ ಒಂದು ಫೋಟೊ ಇಟ್ಟುಕೊಂಡು ನನ್ನ ಹೆಸರು ತಳುಕು ಹಾಕುವ ಕೆಲಸ ಮಾಡಬೇಡಿ ಎಂದು ಹೇಳಿದರು.
ಹಲವಾರು ಬಾರಿ ಇಂದ್ರಜಿತ್ ನನ್ನನ್ನು ಭೇಟಿ ಮಾಡಿದ್ದಾರೆ. ಆದರೆ, ಇತ್ತೀಚೆಗೆ ಅವರು ಭೇಟಿ ಮಾಡಿಲ್ಲ. ಹಲವಾರು ಬಾರಿ ಭೇಟಿ ಮಾಡಿ ಸಂದರ್ಶನ ಮಾಡಿದ್ದಾರೆ. ಸಿನಿಮಾ ಬಗ್ಗೆ ಮತನಾಡಿದ್ದಾರೆ. ಇಂದ್ರಜಿತ್ ಲಂಕೇಶ್ ಅವರಿಗೆ ಮಾನವಿ ಮಾಡುತ್ತೇನೆ. ಈ ಫೋಟೋ ಯಾರು? ಯಾವ ಕಾರಣಕ್ಕೆ ಬಳಕೆ ಮಾಡಿಕೊಳ್ಳಲು ಹೊರಟಿದ್ದಾರೆ. ಸತ್ಯ ಅವರೇ ತಿಳಿಸುವುದು ಒಳ್ಳೆಯದು ಎಂದರು.
ಮೀನು ಮಾರಾಟ ಮಾಡಿ ಕುಟಂಬಕ್ಕೆ ನೆರವು: ಓದಿನಲ್ಲೂ ಮುಂದಿರುವ ಬಾಲಕನ ಗುಣಕ್ಕೆ ಪೊಲೀಸ್​ ಅಧಿಕಾರಿ ಫಿದಾ!

ಮುಖಕ್ಕೆ ಧರಿಸಬೇಕಿದ್ದ ಮಾಸ್ಕನ್ನು ಸಚಿವರು ಎಲ್ಲಿ ಹಾಕಿಕೊಂಡಿದ್ದಾರೆ ನೋಡಿ- ಜಾಲತಾಣದಲ್ಲಿ ಟ್ರೋಲ್​

ದಯವಿಟ್ಟು ನನಗೆ ಚಿನ್ನ ಬೇಡ: ಮದುವೆಯಲ್ಲಿ ವರದಕ್ಷಿಣೆ ವಿರೋಧಿ ಹೇಳಿಕೆ ನೀಡಿ ಮಾದರಿಯಾದ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + sixteen =
Remember me
