ಹುಬ್ಬಳ್ಳಿ:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಹಾಗೂ ಅವರ ಸಹಚರರು ಜೈಲು ಪಾಲಾಗಿದ್ದು, ವಿಚಾರಣೆ ತೀವ್ರಗೊಂಡಂತೆ ಹೊಸ ವಿಚಾರಗಳು ಹೊರ ಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಪ್ರತಿಕ್ರಿಯಿಸಿದ್ದಾರೆ. ತನಿಖೆ ನಡೆಯುತ್ತಿದೆ. ಇಂತಹ ಸಮಯದಲ್ಲಿ ಪ್ರಕರಣ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ತಮ್ಮ ಪುತ್ರ ಸಮರ್ಜಿತ್​ ಲಂಕೇಶ್​ ಹಾಗೂ ಸಾನ್ಯಾ ಅಯ್ಯರ್​ ನಟನೆಯ ಗೌರಿ ಚಿತ್ರದ ಪ್ರಚಾರದ ಅಂಗವಾಗಿ ಹುಬ್ಬಳ್ಳಿಗೆ ಆಗಮಿಸಿದ್ದ ಅವರು, ತ್ರಕರ್ತನಾಗಿ ನಾನು ಕೆಲವು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದೇನೆ ಅಷ್ಟೇ. ಅದನ್ನು ಹೊರತುಪಡಿಸಿ ನನ್ನ ಹಾಗೂ ದರ್ಶನ್​ ನಡುವೆ ಏನೂ ಇಲ್ಲ ಎಂದಿದ್ದಾರೆ.
ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ. ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ. ನೆರೆಯವರ ದುಖಃಕ್ಕೆ ಅಳುವವರ ಮೆಚ್ಚ ಕೂಡಲಸಂಗಮದೇವ ಎಂದು ಬಸವಣ್ಣನವರ ವಚನ ಹೇಳುವ ಮೂಲಕ ಮಾರ್ಮಿಕವಾಗಿ ನುಡಿದರು.
ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆ ಪ್ರಕರಣ; ನಟ ದರ್ಶನ್​ ಸಿಕ್ಕಿಬಿದ್ದಿದ್ದು ಮಾತ್ರ ರೋಚಕ
ಬಳಿಕ ಇದಕ್ಕೆ ಸ್ಪಷ್ಟನೆ ನೀಡಿದ ಇಂದ್ರಜಿತ್​ ದರ್ಶನ್ ಅವರಿಗೆ ನಾನು ಯಾಕೆ ಟಾಂಗ್ ನೀಡಲಿ ಬಸವಣ್ಣನ ವಚನ ಹೇಳಿದ್ದೇನೆ ಅಷ್ಟೇ. ದರ್ಶನ್​ ಜೊತೆ ನಾನು ಸಿನಿಮಾ ಮಾಡಿದ್ದೇನೆ. ಪತ್ರಕರ್ತನಾಗಿ ನಾನು ಕೆಲವು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದೇನೆ ಅಷ್ಟೇ. ಅದನ್ನು ಹೊರತುಪಡಿಸಿ ನಮ್ಮ ನಡುವೆ ಏನೂ ಇಲ್ಲ. ಅನ್ಯಾಯ ಆದಾಗ ಧ್ವನಿ ಎತ್ತುವುದನ್ನು ನಾನು ನನ್ನ ತಂದೆ ಲಂಕೇಶ್ ಅವರಿಂದ ಕಲಿತ್ತದ್ದು. ಕೊಲೆಯಾದ ರೇಣುಕಾ ಸ್ವಾಮಿ ಕುಟುಂಬದವರಿಗೆ ನ್ಯಾಯ ಸಿಗಬೇಕು. ವಿಜಯಲಕ್ಷ್ಮಿ ಮತ್ತು ಅವರ ಮಗನಿಗೆ ದೇವರು ಶಕ್ತಿ ಕೊಡಲಿ ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನ ಇಡೀ ಚಿತ್ರರಂಗ ಖಂಡಿಸಬೇಕು‌. ಯಾರು ಕೊಲೆ ಮಾಡಿದ್ದಾರೋ ಅವರಿಗೆ ಶಿಕ್ಷೆ ಅಲ್ಲ, ದೊಡ್ಡ ಶಿಕ್ಷೆ ಆಗಬೇಕು. ನಾನು ಚಿತ್ರರಂಗದ ದ್ವನಿಯಾಗಿ ಈ ಮಾತನ್ನು ಆಡುತ್ತಿದ್ದೇನೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಅವರಿಗೆ ಸ್ವಲ್ಪ ಸಮಯ ಕೊಡಿ. ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ನ್ಯಾಯ ಒದಿಗಸಬೇಕು. ಗೌರಿ ಕಳೆದುಕೊಂಡರೂ ನನಗೆ ನ್ಯಾಯ ಸಿಕ್ಕಿಲ್ಲ. ಸರ್ಕಾರ ಅವರಿಗೆ ನ್ಯಾಯ ಕೊಡಬೇಕು. ಯಾರು ಕೊಲೆ ಮಾಡಿದಾರೆ ಅನ್ನೋದನ್ನ ಕಮಿಷನರ್ ಹೇಳಿದ ಕೂಡಲೇ ಪ್ರತಿಭಟನೆ ಮಾಡೋಣ. ನಾನು ಕೂಡ ಪ್ರತಿಭಟನೆ ಮಾಡ್ತೀನಿ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಹೆಚಚು ಬಳಕೆಯಿಂದ ಯುವಜನತೆ ಹಾಳಾಗುತ್ತಿದ್ದಾರೆ. ಇತ್ತೀಚಿಗಷ್ಟೇ ಎಸ್​ಎಸ್ಎಲ್‌ಸಿಯಲ್ಲಿ ರ‍್ಯಾಂಕ್ ಬಂದ ಹುಡುಗಿಯನ್ನು ಆಡಿಕೊಳ್ಳಲಾಯಿತು. ಆಕೆಯ ರೂಪದ ಜನರು ಬಗ್ಗೆ ಕೆಟ್ಟ ಕಮೆಂಟ್ ಮಾಡಿದರು. ನಾವು ಇಂಥ ದುರಂತದ ಸ್ಥಿತಿಯಲ್ಲಿ ಇದ್ದೀವಿ. ಸಾಮಾಜಿಕ ಜಾಲತಾಣದಿಂದಲೇ ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ, ಮಂತ್ರಿಗಳ ಮನೆಯಲ್ಲಿ ಈ ರೀತಿ ಆದಾಗ ಗೊತ್ತಾಗುತ್ತೆ. ಶೀಘ್ರದಲ್ಲಿ ಇದರ ಬಗ್ಗೆ ಆ್ಯಕ್ಷನ್ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
