ಬೆಂಗಳೂರು:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬ ನಡೆಸುತ್ತಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕೆಐಎಡಿಬಿ ಜಮೀನು ಮಾಡಲಾಗಿದೆ. ಈ ಕುಟುಂಬ ಏರೋಸ್ಪೇಸ್ ಉದ್ಯಮಿಗಳಾಗಿದ್ದು ಯಾವಾಗ ? ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯು ಹೈಟೆಕ್ ಡಿೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಹಂಚಿಕೆ ಮಾಡಿದ್ದ 45.94 ಎಕರೆ ಪೈಕಿ ಐದು ಎಕರೆ ಜಮೀನನ್ನು ಪರಿಶಿಷ್ಟ ಜಾತಿ ಕೋಟಾದಲ್ಲಿ ಈ ಟ್ರಸ್ಟ್‌ಗೆ ಮಂಜೂರು ಮಾಡಲಾಗಿದೆ.
ಲಹರ್‌ಸಿಂಗ್ ಸಿರೋಯ ಅವರು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿದ್ದಾರೆ. ಡಿೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಐದು ಎಕರೆ ಜಮೀನು ಮಂಜೂರು ಮಾಡಿರುವುದು ದಾಖಲೆ ಆಧಾರದಲ್ಲಿ ಸುದ್ದಿ ವಾಹಿನಿಯೊಂದರ ವರದಿಯಿಂದ ಬೆಳಕಿಗೆ ಬಂದಿದೆ.
ಬೆಂಗಳೂರು ಸಮೀಪದ ಹೈಟೆಕ್ ಡಿೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ನಾಗರಿಕ ಸೌಲಭ್ಯಗಳಿಗೆ ಕಾದಿಟ್ಟ ಈ ಜಮೀನನ್ನು ಪರಿಶಿಷ್ಟ ಜಾತಿ ಕೋಟಾದಲ್ಲಿ ಮಂಜೂರು ಮಾಡಲಾಗಿದೆ. ಕುತೂಹಲಕಾರಿ ಅಂಶವೆಂದರೆ,
ಟ್ರಸ್ಟ್‌ನಲ್ಲಿ ಸ್ವತಃ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ರಾಧಾಬಾಯಿ ಖರ್ಗೆ, ಅಳಿಯ ರಾಧಾಕೃಷ್ಣ, ಅವರ ಮಗ ಹಾಗೂ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ, ಮತ್ತೊಬ್ಬ ಪುತ್ರ ರಾಹುಲ್ ಖರ್ಗೆ ಟ್ರಸ್ಟಿಗಳಾಗಿದ್ದಾರೆ. ಸ್ವಹಿತಾಸಕಿ ಸಂಘರ್ಷ, ಸ್ವಜನಪಕ್ಷಪಾತ, ಅಧಿಕಾರದ ದುರ್ಬಬಳಕೆ ಅಲ್ಲವೆ ? ಎಂಬ ಪ್ರಶ್ನೆಗಳನ್ನು ಹುಟ್ಟಿಹಾಕಿದೆ.
ಸಚಿವ ಎಂ.ಬಿ.ಪಾಟೀಲ ಈ ಭೂಮಿ ಮಂಜೂರು ಮಾಡಲು ಒಪ್ಪಿಗೆ ನೀಡಿದ್ದಾದರೂ ಹೇಗೆ ?, ಖರ್ಗೆ ಕುಟುಂಬವು ಯಾವಾಗ ಏರೋಸ್ಪೇಸ್ ಉದ್ಯಮಿಗಳಾದರು ? ಈ ಅಕ್ರಮ ಹಂಚಿಕೆ ವಿಷಯ ಆರ್‌ಟಿಐ ಕಾರ್ಯಕರ್ತನ ಮೂಲಕ ರಾಜ್ಯಪಾಲರ ಕಚೇರಿಗೂ ತಲುಪಿದೆ.
ಮೈಸೂರಿನ ವಿವಾದಿತ ಮುಡಾ ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯನವರು ಬಿಟ್ಟುಕೊಡುವಂತಹ ಪರಿಸ್ಥಿತಿ ತಲೆದೋರಿದೆ. ಅದೇ ರೀತಿ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬ ಅಂತಿಮವಾಗಿ ಈ ಜಮೀನು ಬಿಟ್ಟು ಕೊಡಬೇಕಾದೀತು ಎಂದು ಲಹರ್ ಸಿಂಗ್ ಸಿರೋಯ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + twenty =
Remember me
