ಬೆಂಗಳೂರು:ಕೈಗಾರಿಕೆಗಳ ಪುನರಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೈಗಾರಿಕೋದ್ಯಮಿಗಳಿಗೆ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯೋದ್ಯಮ ಸಂಘಟನೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು, ಕಳೆದೊಂದು ತಿಂಗಳಲ್ಲಿ ಕೈಗಾರಿಕೋದ್ಯಮಿಗಳು ಸಾಕಷ್ಟು ನಷ್ಟಕ್ಕೊಳಗಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಆದರೆ ಕಾರ್ಖಾನೆಗಳ ಮಾಲೀಕರು, ಕಾರ್ವಿುಕರ ವೇತನವನ್ನು ತಪ್ಪದೆ ಪಾವತಿಸಬೇಕು. ಪ್ರಧಾನಿ ಮೋದಿ ಅವರು ಮುಂದಿನ ನಿರ್ಣಯ ಹಾಗೂ ಕೇಂದ್ರದ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ನಿರೀಕ್ಷಿಸುತ್ತಿದ್ದು, ಇದರ ಆಧಾರದ ಮೇಲೆ ಮುಂದಿನ ತೀರ್ವನಗಳನ್ನು ಕೈಗೊಳ್ಳಲಾಗುತ್ತದೆ. ಮೇ 4ರ ಬಳಿಕ ಕೈಗಾರಿಕೆಗೆ ಆರಂಭಕ್ಕೆ ಅನುಮತಿ ಸಿಗುವ ನಿರೀಕ್ಷೆ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.
ಈಗಾಗಲೇ ರಾಜ್ಯದ ಹಸಿರು ವಲಯಗಳಲ್ಲಿ ಕೈಗಾರಿಕೆ ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ. ಕಾರ್ಖಾನೆಗಳಲ್ಲಿ ಕಾರ್ವಿುಕರು, ಸಿಬ್ಬಂದಿಯ ಸುರಕ್ಷತೆಗೆ ಆದ್ಯತೆ ನೀಡಬೇಕು. ಸ್ಯಾನಿಟೈಜರ್ ಬಳಕೆ, ಮಾಸ್ಕ್ ಧಾರಣೆ ಕಡ್ಡಾಯವಾಗಿದ್ದು, ಸಾಮಾಜಿಕ ಅಂತರ ಮತ್ತಿತರ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸೂಚಿಸಿದರು. ನಿಮ್ಮೆಲ್ಲರ ಸಮಸ್ಯೆಗಳನ್ನು ಸರ್ಕಾರ ಸಹಾನುಭೂತಿಯಿಂದ ಪರಿಶೀಲಿಸಲಿದೆ. ಬೇಡಿಕೆಗಳ ಕುರಿತು ಅಧಿಕಾರಿಗಳೊಂದಿಗೆ ರ್ಚಚಿಸಿ, ಸರ್ಕಾರದ ಇತಿ ಮಿತಿಯಲ್ಲಿ ಸಾಧ್ಯವಾದಷ್ಟು ಸ್ಪಂದಿಸಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಕಾರ್ಖಾನೆ ಮಾಲೀಕರು, ಕೆಲಸಗಾರರ ದುಡಿಮೆ ಅವಧಿ ಹೆಚ್ಚಳಕ್ಕೆ ಮನವಿ ಸಲ್ಲಿಸಿದಲ್ಲಿ ಕಾರ್ವಿುಕ ಇಲಾಖೆ ಅನುಮತಿ ನೀಡಲಿದೆ ಎಂದರು. ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ, ಕಾರ್ವಿುಕ ಸಚಿವ ಶಿವರಾಮ
ಹೆಬ್ಬಾರ್, ಎಫ್​ಕೆಸಿಸಿಐ, ಸಣ್ಣ ಕೈಗಾರಿಕೆಗಳ ಸಂಘ, ಫಿಕ್ಕಿ, ಸಿಐಐ, ಅವೇಕ್, ಅಸೋಚಾಂ, ಬಿಸಿಐಸಿ, ಮಹಿಳಾ ಉದ್ಯಮಿಗಳ ಒಕ್ಕೂಟ ಮತ್ತಿತರ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಸಿಎಂಗೆ ಮೆಚ್ಚುಗೆ:ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಸಭೆಯಲ್ಲಿ ಕೈಗಾರಿಕೋದ್ಯಮಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + two =
Remember me
