ಬೆಂಗಳೂರು:ಭ್ರೂಣ ಪತ್ತೆ ಹಾಗೂ ಗರ್ಭಪಾತ ಮಾಡಿಸುತ್ತಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶಿಸಿದೆ.
ಈ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರಿಗೆ ದೂರವಾಣಿ ಕರೆ ಮೂಲಕ ಸೂಚಿಸಿದ ಸಿಎಂ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಸಿಎಂ ಭ್ರೂಣ ಪತ್ತೆ ಪ್ರಕರಣದ ಗಂಭೀರತೆಯನ್ನು ಮನಗಂಡು ಈ ಪ್ರಕರಣವನ್ನು CID ತನಿಖೆಗೆ ಒಪ್ಪಿಸಲಾಗುತ್ತಿದ ಎಂದು ತಿಳಿಸಿದ್ದಾರೆ.
ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಈವರೆಗೂ 9 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರು ವಿಚಾರಣೆ ವೇಳೆ ಕಳೆದ 3 ವರ್ಷದಲ್ಲಿ 900 ಕ್ಕೂ ಹೆಚ್ಚು ಹೆಣ್ಣು ಭ್ರೂಣ ಪತ್ತೆ ಹಾಗೂ ಗರ್ಭಪಾತ ಮಾಡಿಸಿರುವುದು ಪತ್ತೆಯಾಗಿತ್ತು. ಈ ಪ್ರಕರಣದ ಸಮಗ್ರ ತನಿಖೆಗಾಗಿ ಇದೀಗ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.
ಭ್ರೂಣ ಪತ್ತೆ ಪ್ರಕರಣದ ಗಂಭೀರತೆಯನ್ನು ಮನಗಂಡು ಈ ಪ್ರಕರಣವನ್ನು CID ತನಿಖೆಗೆ ಒಪ್ಪಿಸಲಾಗುತ್ತಿದೆ.– ಮುಖ್ಯಮಂತ್ರಿ@siddaramaiah#ಭ್ರೂಣಪತ್ತೆ
ಇದನ್ನೂ ಓದಿ:ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ
ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಕೇಸ್​ನಲ್ಲಿ ಇಲಾಖೆ ತನಿಖೆ ಬಾಕಿ ಇರಿಸಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣ ಬೆಳಕಿಗೆ ಬಂದ ನಂತರ ಹಳೇ ನೋಟಿಸ್​ ಅಂಟಿಸುವ ಮೂಲಕ ಕರ್ತವ್ಯಲೋಪ ಆರೋಪದಡಿ ಮೈಸೂರು ಟಿಹೆಚ್​ಒ ರಾಜೇಶ್ವರಿ ಅಮಾನತು ಮಾಡಲಾಗಿದೆ. ಹಳೇ ನೋಟಿಸ್ ಅಂಟಿಸಿ ಆರೋಗ್ಯ ಇಲಾಖೆಗೆ ಮುಜುಗರ ತಂದಿದ್ದಾರೆ.
ಅನಧಿಕೃತ ಆಸ್ಪತ್ರೆ ವಿರುದ್ಧ ಕ್ರಮಕೈಗೊಳ್ಳದ ಮೈಸೂರು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿ ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಮಾನತಿಗೆ ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್​ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − eight =
Remember me
