ಬೆಂಗಳೂರು: ಕೇಂದ್ರ ಸರ್ಕಾರವು ವರ್ಷಕ್ಕೆ 2.50 ಲಕ್ಷ ಕೋಟಿ ರೂ.ಗಳಷ್ಟು ಅಗಾಧ ಸೆಸ್ ಸಂಗ್ರಹಿಸುತ್ತಿದ್ದರೂ ಅದರ ಹಂಚಿಕೆಯಲ್ಲಿ ಕರ್ನಾಟಕದಂತಹ ಪುರೋಗಾಮಿ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಆಕ್ಷೇಪಿಸಿದ್ದಾರೆ.
ಸೆಸ್/ತೆರಿಗೆ ಪಾವತಿಯಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣದಂತಹ ರಾಜ್ಯಗಳು ಮುಂಚೂಣಿಯಲ್ಲಿವೆ. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರದಿಂದ ಈ ರಾಜ್ಯಗಳಿಗೆ ನ್ಯಾಯೋಚಿತ ಪಾಲು ಬರುತ್ತಿಲ್ಲ. ಬದಲಿಗೆ ಹೆಚ್ಚಿನ ಪಾಲೆಲ್ಲ ಉತ್ತರಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಿಗೆ ಹೋಗುತ್ತಿದೆ. ಇದು ಖಂಡಿತವಾಗಿಯೂ ಪ್ರಶ್ನಾರ್ಹ ಎಂದು ಹೇಳಿದ್ದಾರೆ.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕರ್ನಾಟಕದಂತಹ ರಾಜ್ಯಗಳು ತಮಗೆ ಬರಬೇಕಾದ ತೆರಿಗೆ ಪಾಲಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಬೇಕಾದ ಪ್ರಮೇಯ ಬರುತ್ತದೆ ಎಂದು ಪಾಟೀಲ ಎಚ್ಚರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + fifteen =
Remember me
