ಬೆಂಗಳೂರು: ಮೋದಿ 3ನೇ ಬಾರಿ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಭಾರಿ ಅನ್ಯಾಯ ಮಾಡಲಾಗಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಉಂಡೆನಾಮ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಕಿಡಿ ಕಾರಿದ್ದಾರೆ.
ಮೇಕೆದಾಟು ಸಮಾನಾಂತರ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ, ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ.ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಅದಕ್ಕೂ ಕೇಂದ್ರ ಸರ್ಕಾರ ಎಳ್ಳುನೀರು ಬಿಟ್ಟಿದೆ. ಬೆಂಗಳೂರಿನಲ್ಲಿ 60 ಕಿಮೀ ಸುರಂಗ ರಸ್ತೆ ನಿರ್ಮಾಣದ ಬಗ್ಗೆ ಕೂಡ ಪ್ರಸ್ತಾಪ ಮಾಡಿಲ್ಲ.ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಮೆಟ್ರೋ ಮಾರ್ಗ ವಿಸ್ತರಣೆ ಮಾಡುವ ಬಗ್ಗೆ ಮತ್ತು 44.65 ಕಿ.ಮೀ ಉದ್ದದ 3ನೇ ಹಂತದ ಮೆಟ್ರೋ ವಿಸ್ತರಣೆ ಬಗ್ಗೆ ಕೂಡ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. 37 ಕಿ.ಮೀ. ಹೆಬ್ಬಾಳ-ಸರ್ಜಾಪುರ ಯೋಜನೆಗೆ ಕೂಡ ಉಂಡೇನಾಮ ಹಾಕಿದ್ದಾರೆ ಎಂದು ಕೇಂದ್ರ ಬಜೆಟ್ ವಿರುದ್ಧ ಪ್ರತಿಕ್ರಿಯೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ಹೊಸ ಹೆದ್ದಾರಿ ಯೋಜನೆಗಳಾದ ಗುಂಡ್ಲುಪೇಟೆ, ನಂಜನಗೂಡು ಮೈಸೂರು ಮೂಲಕ ಕೊಳ್ಳೆಗಾಲ-ಕೇರಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ಅಗಲೀಕರಣ ಯೋಜನೆಯನ್ನು ಕಡೆಗಣಿಸಿದ್ದಾರೆ.ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಬಳಿಕ ಪಕೋಡ ಮಾಡಿ ಎಂದಿದ್ದರು. ಈಗ ಪ್ರತಿ ವರ್ಷ 75 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳುವ ಮೂಲಕ ವೈಫಲ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಆರೋಪಿಸಿದ ಅವರು 75 ಲಕ್ಷ ಉದ್ಯೋಗ ಕೊಡುತ್ತೇನೆ ಎನ್ನುವ ಇವರು ಪ್ರತಿ ವರ್ಷ 4 ಕೋಟಿ ವಿದ್ಯಾರ್ಥಿಗಳಿಗೆ ಸ್ಕಿಲ್ ತರಬೇತಿ ಕೊಡುವುದಾಗಿ ಹೇಳಿದ್ದಾರೆ ಉಳಿದ 3.25 ಕೋಟಿ ಮಂದಿ ಏನು ಮಾಡಬೇಕು ಎಂದು ಪ್ರಶ್ನಿಸಿದರು.
ಒಂದು ಕಡೆ ರೈತರ ಆದಾಯ ದ್ವಿಗುಣವಾಗಿಲ್ಲ, ಭಾರತ ಗುಡಿಸಲು ಮುಕ್ತ ಎನ್ನುವುದು ಕನಸಾಗಿಯೇ ಉಳಿದಿದೆ. 370 ಕಾಯಿದೆ ಮೂಲಕ ವಿಶೇಷ ಸ್ಥಾನಮಾನ ನೀಡಿದ ಜಮ್ಮು ಮತ್ತು ಕಾಶ್ಮೀರ ಇನ್ನೂ ಉಗ್ರರಿಂದ ಮುಕ್ತವಾಗಿಲ್ಲ, ಪ್ರತಿ ಮನೆಗೂ ವಿದ್ಯುತ್ ಕೊಟ್ಟಿಲ್ಲ ಇದೆಲ್ಲವೂ ಮೋದಿ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ, 100 ಸ್ಮಾರ್ಟ್ ಸಿಟಿ ನಿರ್ಮಾಣ ಮಾಡುವುದಾಗಿ ಮೋದಿ ಮತ್ತೊಂದು ಟೋಪಿ ಹಾಕಿದ್ದಾರೆ. ಎಲ್ಲಿ ಸರ್ಕಾರ ಬೀಳುತ್ತದೋ ಎನ್ನುವ ಭಯದಲ್ಲಿ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ಇವರಿಗೆ ಸರ್ಕಾರ ಭದ್ರಪಡಿಸಿಕೊಳ್ಳಬೇಕೆ ಹೊರತು ಅಭಿವೃದ್ಧಿ ಬೇಕಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಆರೋಪಿಸಿದರು.
ತೆರಿಗೆ ವಿನಾಯಿತಿ ಸಿಗುತ್ತದೆ ಎಂದು ಕಾಯುತ್ತಿದ್ದ ಮಧ್ಯಮ ವರ್ಗದವರಿಗೆ ಈ ಬಜೆಟ್ ನಿರಾಸೆ ಮೂಡಿಸಿದ್ದು, ಸ್ಟಾಡಂರ್ಡ್ ಡಿಡಕ್ಷನ್ ಮಿತಿಯನ್ನು 50,000 ರೂ. ಗಳಿಂದ 75,000 ರೂ. ಗಳಿಗೆ ಮಾಡಿರುವುದಕ್ಕೆ ಮಧ್ಯಮ ವರ್ಗದ ಜನ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸಿರುವುದನ್ನು ವಿರೋಧಿಸಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಚೊಂಬು ಹಿಡಿದು ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight − 3 =
Remember me
