ಶಿವಮೊಗ್ಗ:ಒಳ ಮೀಸಲಾತಿ ಜಾರಿ ಮಾಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದ ವಿಚಾರದ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ವಿವಿಧೆಡೆಗಳಲ್ಲಿ ಪ್ರತಿಭಟನೆಗಳು ಭುಗಿಲೆದಿದ್ದು, ಇದರ ನಡುವೆ ಶಿವಮೊಗ್ಗದಲ್ಲಿ ಯುವಕನೊಬ್ಬ ಬಿಜೆಪಿ ನಾಯಕರಿಗೆ ಪಿಂಡ ಬಿಡಲು ಮುಂದಾದ ಘಟನೆ ನಡೆದಿದೆ.
ಶಿವಮೊಗ್ಗದ ಬಂಜಾರ ಕನ್ವೆನ್ಷನ್ ಹಾಲ್ ಮುಂಭಾಗದಲ್ಲಿ ವಿನಯ್ ರಾಜಾವತ್ ಎಂಬ ಯುವಕ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್ ಅವರ ಫೋಟೋ ಸುಟ್ಟು ಬಳಿಕ ಪಿಂಡ ಬಿಡಲು ಮುಂದಾಗಿದ್ದರು.
ವಿಷಯ ತಿಳಿದು ಸ್ಥಳಾಕ್ಕಾಗಮಿಸಿದ ಡಿವೈಎಸ್ಪಿ ಬಾಲರಾಜ್ ಸುಮಾರು ಅರ್ಧ ಗಂಟೆಗೂ ಹೆಚ್ಚು‌ ಕಾಲ ಯುವಕನ ಮನವೊಲಿಕೆಗೆ ಯತ್ನಿಸಿದ್ದು, ಬಳಿಕ ಪಿಂಡ ಬಿಡಲು ತಂದಿದ್ದ ಸಾಮಾಗ್ರಿಗಳು ಪೊಲೀಸರಿಗೆ ಹಸ್ತಾಂತರಿಸಿದ ಯುವಕ ಪ್ರತಿಭಟನೆಯನ್ನು ಕೈಬಿಟ್ಟಿದ್ದಾನೆ ಹಾಗೂ ಇದೇ ತಿಂಗಳ 30ರಂದು ಪಿಂಡ ಬಿಡುವ ಕಾರ್ಯವನ್ನು ಮಾಡುವುದಾಗಿ ತಿಳಿಸಿ ಹೊರಟ್ಟಿದ್ದಾನೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + twelve =
Remember me
