ಹಾಸನ:ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಅದರಲ್ಲೂ ಒಬ್ಬರ ಕೈ ತುಂಡಾಗಿ ದೇಹದಿಂದ ದೂರದಲ್ಲಿ ಬಿದ್ದಿದ್ದ ದೃಶ್ಯ ಕಂಡುಬಂದಿದೆ. ಹಾಸನ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಾರೋಹಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಕೆಎ-02, ಎಂಕ್ಯೂ-5328 ನಂಬರ್‌ನ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಗಾಯಾಳುಗಳು ಬೆಂಗಳೂರು ಮೂಲದವರು ಎಂಬ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ:ಸ್ಪಂದನಾ ಪಾರ್ಥಿವ ಶರೀರದ ಪೋಸ್ಟ್​ ಮಾರ್ಟಂ ಮುಕ್ತಾಯ; ಇಲ್ಲಿದೆ ಲೇಟೆಸ್ಟ್ ಅಪ್​ಡೇಟ್ಸ್​
ಕಾರಿನಲ್ಲಿ ಐವರು ಸ್ನೇಹಿತರಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಮದ್ಯಸೇವನೆ ಹಾಗೂ ಅತಿವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಒಬ್ಬರ ಕೈ ತುಂಡಾಗಿ ದೇಹದಿಂದ ತುಂಬಾ ದೂರಲ್ಲಿ ಬಿದ್ದಿದೆ. ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ಪತ್ನಿಯ ಸ್ಮರಣಾರ್ಥ ದೇವಸ್ಥಾನ ನಿರ್ಮಿಸಿ ಆಕೆಯ ಮೂರ್ತಿಗೆ ನಿತ್ಯವೂ ಪೂಜೆ ಸಲ್ಲಿಸುತ್ತಿರುವ ಪತಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 8 =
Remember me
