ಬೆಂಗಳೂರು:ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರಿಸುವಂತೆ ವೀರಶೈವ ಲಿಂಗಾಯತ ಮಠಾಧೀಶರ ವೇದಿಕೆ ಆಗ್ರಹಿಸಿದೆ. ಕೇಂದ್ರ ಸರ್ಕಾರ ತಮ್ಮ ಬೇಡಿಕೆ ಈಡೇರಿಸುವವರೆಗೂ ಅಗತ್ಯವಿರುವ ಎಲ್ಲ ರೀತಿಯ ಹೋರಾಟ ನಡೆಸುವ ಎಚ್ಚರಿಕೆ ಸಂದೇಶ ರವಾನಿಸಿದೆ.
ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹಾಗೂ ಶ್ರೀಶೈಲ ಜಗದ್ಗುರು ಚನ್ನಬಸವ ಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.
ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ವಿವಿಧ ಮಠಾಧೀಶರು ಸಭೆ ನಡೆಸಿ ಸುದೀರ್ಘ ಚರ್ಚೆ ನಡೆಸಿ, ಕೇಂದ್ರದ ಮೇಲೆ ಒತ್ತಡ ತರಲು ಹಾಗೂ ಹೋರಾಟದ ರೂಪುರೇಷೆ ಕುರಿತು ಸಮಾಲೋಚನೆ ನಡೆಸಿದರು.ಇದನ್ನೂ ಓದಿ:ಅನುಚಿತ ಸ್ಪರ್ಶ, ಲೈಂಗಿಕತೆಗೆ ಒತ್ತಾಯ: WFI ಅಧ್ಯಕ್ಷರ ವಿರುದ್ಧ ದಾಖಲಾಗಿರೋ 2 FIR​, 10 ದೂರುಗಳ ವಿವರ ಇಲ್ಲಿದೆ…
ಉಭಯ ಜಗದ್ಗುರುಗಳು ಮಾತನಾಡಿ, ಈ ಹೋರಾಟ ತಾರ್ಕಿಕ ಅಂತ್ಯ ತಲುಪುವವರೆಗೂ ನಿಲ್ಲುವುದಿಲ್ಲ ಎಂದು ಸ್ಪಷ್ಟ ಸಂದೇಶವನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಿದರು. ಬೇರೆ ಬೇರೆ ರಾಜ್ಯದ ವೀರಶೈವ ಲಿಂಗಾಯತ ಉಪ ಪಂಗಡಗಳನ್ನು ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರಿಸಲಾಗಿದೆ. ಆದರೆ, ರಾಜ್ಯದಲ್ಲಿ 90ಕ್ಕೂ ಹೆಚ್ಚು ಉಪ ಪಂಗಡಗಳಿದ್ದು, ಈ ಪೈಕಿ ಕೇವಲ 16 ಒಳ ಪಂಗಡಗಳನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲಾಗಿದೆ. ಉಳಿದ ಉಪ ಪಂಗಡಗಳನ್ನು ಕೈಬಿಡಲಾಗಿದೆ. ಕೈಬಿಟ್ಟಿರುವ ಎಲ್ಲ ಒಳ ಪಂಗಡಗಳನ್ನೂ ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ನಮ್ಮ ಬೇಡಿಕೆ ಹಲವು ದಶಕಗಳದ್ದು. ಇದುವರೆಗೆ ಈ ಬೇಡಿಕೆ ಪರ್ಯಾಯ ಬೇಡಿಕೆ ಮಾತ್ರ ಆಗಿತ್ತು. ಈಗ ಇದು ಪ್ರಧಾನ ಬೇಡಿಕೆ ಆಗಿದೆ ಎಂದು ಸ್ಪಷ್ಟಪಡಿಸಿದರು.
ಲೈಂಗಿಕ ದೌರ್ಜನ್ಯದ ಆರೋಪಿ ಬಿಷಪ್​ರಿಂದ ರಾಜೀನಾಮೆ; ಶಿಸ್ತು ಕ್ರಮ ಅಲ್ಲ ಎಂದ ಚರ್ಚ್!

ನ್ಯಾಯಕ್ಕಾಗಿ ರಾತ್ರಿ 1 ಗಂಟೆವರೆಗೂ ಮಗು ಜತೆ ಕುದುರೆಮುಖ ಪೊಲೀಸ್​ ಠಾಣೆಯಲ್ಲೇ ಕುಳಿತ ಮಹಿಳೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − fifteen =
Remember me
