ರಾಯಚೂರು:ಇಪ್ಪತ್ತೇಳು ವರ್ಷಗಳ ಹಿಂದಿನ ಪ್ರಕರಣವೊಂದು ನ್ಯಾಯಾಲಯದಲ್ಲಿ ಕೊನೆಗೂ ಇತ್ಯರ್ಥಗೊಂಡಿದ್ದು, ಆರೋಪಿಗಳಿಗೆ ಶಿಕ್ಷೆಯೂ ಘೋಷಣೆಯಾಗಿದೆ. ವಿಶೇಷ ಎಂದರೆ ಈ ಪ್ರಕರಣದಲ್ಲಿ ಪೊಲೀಸ್ ಇನ್​ಸ್ಪೆಕ್ಟರ್ ಹಾಗೂ ತಹಶೀಲ್ದಾರ್ ಅವರೇ ಆರೋಪಿಗಳಾಗಿದ್ದು, ಅವರ ಮೇಲಿನ ಆರೋಪ ಸಾಬೀತಾಗಿದೆ.
1994ರ ಜೂ. 1ರಂದು ನಡೆದ ಪ್ರಕರಣ ಸಂಬಂಧದ ವಿಚಾರಣೆಯಲ್ಲಿ ಆರೋಪ ಸಾಬೀತಾಗಿದ್ದು, ಇನ್​​ಸ್ಪೆಕ್ಟರ್​ ಕಾಶೀನಾಥ್ ಹಾಗೂ ತಹಶೀಲ್ದಾರ್​ ರಾಮಾಚಾರಿ ಎಂಬವರಿಗೆ 3 ವರ್ಷಗಳ ಜೈಲು ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.
ಇದನ್ನೂ ಓದಿ:ಹೆಂಡತಿಯೊಂದಿಗೆ ಜಗಳ, ಇಬ್ಬರು ಗಂಡಂದಿರ ಸಾವು!
ರಾಯಚೂರಿನ ಮಾನ್ವಿಯ ಹರವಿ ಗ್ರಾಮದ ರೈತ ಮುಖಂಡರಾದ ಶಂಕರಗೌಡ ಹಾಗೂ ಬಸನಗೌಡರನ್ನು ಲಾಕಪ್​ನಲ್ಲಿ ಹಾಕಿ ಥಳಿಸಿ ರಕ್ತಗಾಯ ಮಾಡಿ ಜೀವ ಬೆದರಿಕೆಯೊಡ್ಡಿದ್ದ ಆರೋಪ ಅಂದಿನ ಮಾನ್ವಿ ಸಿಪಿಐ ಕಾಶೀನಾಥ್ ಹಾಗೂ ಮಾನ್ವಿ ತಹಶೀಲ್ದಾರ್ ರಾಮಾಚಾರಿ ವಿರುದ್ಧ ದಾಖಲಾಗಿತ್ತು.
ಆರ್​ಡಿಸಿಸಿ ಬ್ಯಾಂಕ್​ನೊಂದಿಗೆ ತಡಕಲ್ ಗ್ರಾಮದ ರೈತರ ದಿನಬಳಕೆ ವಸ್ತುವನ್ನು ಈ ಅಧಿಕಾರಿಗಳು ಜಪ್ತಿ ಮಾಡಿದ್ದರು. ಇದನ್ನು ತಡೆಯಲು ಯತ್ನಿಸಿದ್ದ ರೈತ‌ಮುಖಂಡರಿಗೆ ಅವಾಚ್ಯವಾಗಿ ಬೈದು ಕವಿತಾಳ ಠಾಣೆಯಲ್ಲಿ ಥಳಿಸಿದ ಕುರಿತು ಆರೋಪಿಸಿ ದೂರು ದಾಖಲಾಗಿತ್ತು. ಈ ಕುರಿತ ಪ್ರಕರಣ ರಾಯಚೂರು 3ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಇಂದು ತೀರ್ಪು ಪ್ರಕಟವಾಗಿದೆ.
ಇದನ್ನೂ ಓದಿ:ಎರಡೆರಡು ಸಲ ಲಸಿಕೆ ಪಡೆದರೂ ಕರೊನಾ ಬಂತು!; ವ್ಯಾಕ್ಸಿನ್​ ತಗೊಂಡ ಜಿಲ್ಲಾಧಿಕಾರಿಗೂ ಸೋಂಕು!​
ಏ. 15ರೊಳಗೆ ಕರೊನಾದಿಂದಾಗಿ ದೇಶದಲ್ಲಿ 50 ಸಾವಿರ ಜನರ ಸಾವು!; ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಚಲಿಸುತ್ತಿದ್ದ ಆಟೋದಲ್ಲಿ ಮಹಿಳೆ ಎದುರು ಹಸ್ತಮೈಥುನ ಮಾಡಿಕೊಂಡ ದುರುಳ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − five =
Remember me
