ಬೆಂಗಳೂರು :ಮಗ ಕಾಣೆಯಾಗಿರುವ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದರೂ, ಎಫ್​ಐಆರ್ ದಾಖಲಿಸದೆ ಕರ್ತವ್ಯ ಲೋಪವೆಸಗಿದ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣಾಧಿಕಾರಿಗೆ ಹೈಕೋರ್ಟ್ ಒಂದು ವಾರ ಠಾಣೆಯ ಮುಂದಿನ ರಸ್ತೆಯ ಸ್ವಚ್ಛಗೊಳಿಸುವ ಶಿಕ್ಷೆ ನೀಡಿದೆ. ಕಲಬುರಗಿಯ ಮಿಣಜಗಿ ತಾಂಡಾದ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ಪಿ. ಕೃಷ್ಣಭಟ್ ಅವರಿದ್ದ ಪೀಠ, ಈ ಆದೇಶ ನೀಡಿದೆ.
ಹೈಕೋರ್ಟ್ ಹೇಳಿದ್ದೇನು? : ಪೊಲೀಸ್ ಠಾಣೆ ಅಧಿಕಾರಿಗಳ ಕಾರ್ಯವೈಖರಿ ಆಘಾತಕಾರಿಯಾಗಿವೆ. ಅಪರಾಧ ದಂಡ ಸಂಹಿತೆ ಅನ್ವಯ ನಿಯಮಗಳನ್ನು ಪಾಲನೆ ಮಾಡಲು ವಿಫಲವಾಗಿರುವ ಅಧಿಕಾರಿಗಳು, ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಮುಂದಾಗಿಲ್ಲ. ಮಹಿಳೆ ನೀಡಿರುವ ದೂರನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯವಹಿಸಿರುವ ಠಾಣಾಧಿಕಾರಿಯ ನಡೆ ಕರ್ತವ್ಯಲೋಪವೆನಿಸಿಕೊಳ್ಳುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ನಿಯಮಗಳ ಪ್ರಕಾರ ಅಧಿಕಾರಿಗಳು ಎಫ್​ಐಆರ್ ದಾಖಲಿಸಬೇಕಿತ್ತು. ಒಂದು ವೇಳೆ ತಮ್ಮ ಠಾಣೆಯ ವ್ಯಾಪ್ತಿಯ ಹೊರಗೆ ಪ್ರಕರಣ ನಡೆದಿದ್ದರೂ, ದೂರು ದಾಖಲಿಸಿಕೊಂಡು ಅದನ್ನು ಸಂಬಂಧಪಟ್ಟ ಠಾಣೆಗೆ ವರ್ಗಾಯಿಸಬಹುದಾಗಿತ್ತು. ಆ ಕೆಲಸವನ್ನೂ ಮಾಡದಿರುವುದು ದುರದೃಷ್ಟಕರ. ಪೊಲೀಸರ ಕ್ರಮದಿಂದ ಅರ್ಜಿದಾರ ಮಹಿಳೆ ಮತ್ತು ಆಕೆಯ ಪುತ್ರನ ಸಾಂವಿಧಾನಿಕ ಹಕ್ಕುಗಳಿಗೆ ಧಕ್ಕೆಯಾಗಿದೆ. ಆದ್ದರಿಂದ, ಕರ್ತವ್ಯಲೋಪವೆಸಗಿದ ಅಧಿಕಾರಿ ರಸ್ತೆ ಸ್ವಚ್ಛಗೊಳಿಸುವ ಕೆಲಸ ಮಾಡಬೇಕು ಎಂದು ಆದೇಶದಲ್ಲಿ ಹೇಳಿದೆ.
ಬೇಷರತ್ ಕ್ಷಮೆ ಕೇಳಿದ ಅಧಿಕಾರಿ: ಕರ್ತವ್ಯ ಲೋಪಕ್ಕೆ ಬೇಷರತ್ ಕ್ಷಮೆ ಯಾಚಿಸಿದ ಠಾಣಾಧಿಕಾರಿ, ಭವಿಷ್ಯದಲ್ಲಿ ಇದು ಮರುಕಳಿಸದಂತೆ ಎಚ್ಚರವಹಿಸುವುದಾಗಿ ಭರವಸೆ ನೀಡಿದರು.
ಕಾರ್ಯಾಗಾರ ಆಯೋಜಿಸಿ: ಝಿರೋ ಎಫ್​ಐಆರ್ ಕುರಿತು ಕಲಬುರಗಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಪೊಲೀಸರಿಗೂ ಅರಿವು ಮೂಡಿಸಲು ಕಾರ್ಯಾಗಾರ ಆಯೋಜಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನ್ಯಾಯಪೀಠ ಸೂಚನೆ ನೀಡಿದೆ.
ಪ್ರಕರಣವೇನು?:  ತಾರಾಬಾಯಿ ಪುತ್ರ ಸುರೇಶ್ ಕಳೆದ ಅ.20ರಿಂದ ನಾಪತ್ತೆಯಾಗಿದ್ದರು. ಇದರಿಂದ, ಸ್ಟೇಷನ್ ಬಜಾರ್ ಠಾಣೆಗೆ ತೆರಳಿ ದೂರು ನೀಡಿದ್ದರು. ಆದರೆ, ಪೊಲೀಸರು ಎಫ್​ಐಆರ್ ದಾಖಲಿಸಿರಲಿಲ್ಲ. ಇದರಿಂದ, ತಾರಾಬಾಯಿ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಆದೇಶದ ಮೇರೆಗೆ ಪೊಲೀಸರು ಸುರೇಶನನ್ನು ಪತ್ತೆ ಹಚ್ಚಿ ನ.3ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಡಿಟಿಎಚ್​ ಪರಿಷ್ಕೃತ ಮಾರ್ಗದರ್ಶಿಗೆ ಸಚಿವ ಸಂಪುಟ ಒಪ್ಪಿಗೆ – ಪರವಾನಗಿ 20 ವರ್ಷಕ್ಕೆ, ಎಫ್​ಡಿಐ 100%

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
