ಬೆಂಗಳೂರು:ಕರ್ತವ್ಯ ಲೋಪ ಹಿನ್ನೆಲೆ ಇತ್ತೀಚೆಗೆ ಸಸ್ಪೆಂಡ್ ಆಗಿದ್ದ ಇನ್​ಸ್ಪೆಕ್ಟರ್ ನಂದೀಶ್ ಗುರುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹುಣಸೂರು ಮೂಲದ ನಂದೀಶ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಕೆ.ಆರ್.ಪುರಂ ಪೊಲೀಸ್​ ಠಾಣೆಯಲ್ಲಿ ಇನ್​ಸ್ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಪಬ್​ವೊಂದಕ್ಕೆ ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಕೆಲಸದಿಂದ ಇತ್ತೀಚಿಗೆ ನಂದೀಶ್​ ಅವರನ್ನು ಅಮಾನತು ಮಾಡಲಾಗಿತ್ತು.
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಕೆ.ಆರ್.ಪುರಂನ ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಗುರುವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ತಡರಾತ್ರಿ 2 ಗಂಟೆವರೆಗೂ ಟಾನಿಕ್​ ಬಾರ್​ ತೆರೆದಿತ್ತು. ಮಾಹಿತಿ ತಿಳಿದು ಸಿಸಿಬಿ ಪೊಲೀಸರು ಕಳೆದ ವಾರ ದಾಳಿ ನಡೆಸಿ ಮಾಲೀಕರ ವಿರುದ್ಧ ದೂರು ದಾಖಲಿಸಿದ್ದರು. ಸಮಯ ಮೀರಿ ವಹಿವಾಟು ನಡೆಸುತ್ತಿದ್ದರೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ನಂದೀಶ್​ ವಿರುದ್ಧ ಕೇಳಿಬಂದಿತ್ತು.
ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್​: ಮುಂದಿನ ವರ್ಷವೇ ದೇವಿಯ ದರ್ಶನ ಸಿಗೋದು

ಮಹಡಿ ಮೇಲೆ ಒಣ ಹಾಕಿದ್ದ ಬಟ್ಟೆಗೆ ತಾಗಿದ ಪಟಾಕಿ ಕಿಡಿ: ಧಗಧಗಿಸಿದ ಮನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
