ಬೆಂಗಳೂರು:ಕಾಶ್ಮೀರದಲ್ಲಿ ದಶಕಗಳ ಕಾಲ ಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ನೈಜತೆಯನ್ನು ಇತ್ತೀಚೆಗೆ ಬಿಡುಗಡೆಯಾದ ಕಾಶ್ಮೀರಿ ಫೈಲ್ಸ್​ ಚಿತ್ರ ತೋರಿಸಿಕೊಟ್ಟಿತು. ಇದೀಗ ಈ ಚಿತ್ರ ಶಿಕ್ಷಣದ ಮೇಲೂ ಪರಿಣಾಮ ಬೀರಿದೆ ಎಂದರೆ ತಪ್ಪಾಗಲಾರದು.
ಹೌದು ಕಾಶ್ಮೀರದಲ್ಲಿ ಬದುಕಲಾರದೇ ಆಸ್ತಿ-ಪಾಸ್ತಿಯನ್ನು ತೊರೆದು ಪ್ರಾಣ ರಕ್ಷಣೆಗಾಗಿ ಅಲ್ಲಿಂದ ವಲಸೆಯಾಗಿ ಬಂದ ಸಾವಿರಾರು ಕಾಶ್ಮೀರಿ ಪಂಡಿತರು ದೇಶದ ವಿವಿಧ ಭಾಗಗಳಲ್ಲಿ ಆಶ್ರಯ ಪಡೆದಿದ್ದಾರೆ. ಇಂತಹ ಕಾಶ್ಮೀರಿ ಪಂಡಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಅಂಬಿಕಾ ಮಹಾವಿದ್ಯಾಲಯದ ಉಚಿತ ಶಿಕ್ಷಣ ನೀಡುವುದಾಗಿ ಹೇಳಿದೆ.
ಈ ಬಗ್ಗೆ ಸಂಸ್ಥೆ ಸಂಚಾಲಕ ಸುಬ್ರಹ್ಮಣ್ಯ ನತ್ತೋಜ್​​ ಶನಿವಾರ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ 6ನೇ ತರಗತಿಯಿಂದ ಪದವಿವರೆಗೂ ಉಚಿತ ಶಿಕ್ಷಣ ನೀಡಲಾಗುವುದು. ಅಲ್ಲದೇ ಹಾಸ್ಟೆಲ್​ ವ್ಯವಸ್ಥೆ ಕೂಡ ಮಾಡಿಕೊಡಲಾಗುತ್ತದೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ ಈಗಾಗಲೇ ನಾಲ್ವರು ಕಾಶ್ಮೀರಿ ಪಂಡಿತರ ಮಕ್ಕಳನ್ನು ದಾಖಲು ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರಿ ಫೈಲ್ಸ್​ ಚಿತ್ರ ಕಾಶ್ಮೀರ ಪಂಡಿತರ ಸ್ಥಿತಿಗತಿ ಕುರಿತ ನೈಜತೆಯನ್ನು ತೋರಿಸಿಕೊಟ್ಟಿತ್ತು. ದೇಶಾದ್ಯಂತ ಈ ಚಿತ್ರಕ್ಕೆ ಭಾರೀ ಬೆಂಬಲ ವ್ಯಕ್ತವಾಗಿತ್ತು.
ಸಿದ್ದರಾಮಯ್ಯನವರು ಹೇಳೋದೆಲ್ಲಾ ಸುಳ್ಳಾಗುತ್ತೆ: ಸಿ.ಟಿ. ರವಿ

ಯುದ್ಧ ಪೀಡಿತ ಯೂಕ್ರೇನ್​ಗೆ ಹಾಲಿವುಡ್​ ಖ್ಯಾತ ನಟಿ ಏಂಜಲೀನಾ ಜೋಲಿ ಭೇಟಿ ನೀಡಿದ್ದು ಏಕೆ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 − one =
Remember me
