ಬೆಂಗಳೂರು:ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ:ಎರಡು ಭವಿಷ್ಯವಾಣಿ ನಿಜವಾಗಿವೆ, ದೇಶಕ್ಕೆ ಮತ್ತೊಂದು ಗಂಡಾಂತರ ಕಾದಿದೆ: ಕೋಡಿಶ್ರೀ ಭವಿಷ್ಯ
ಯೋಜನೆಯ ಕುರಿತು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ತೆರಿಗೆ ಪಾವತಿಸುವವರು ಹಾಗೂ ಜಿಎಸ್​​ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದರು.ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಆನ್​ಲೈನ್, ಆಫ್​​ಲೈನ್​​ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಗ್ರಾಮೀಣ ಭಾಗದಲ್ಲಿರುವವರು ನಾಡ ಕಚೇರಿಯಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಗೃಹಜ್ಯೋತಿ ಯೋಜನೆಯನ್ನು ಪಡೆಯಲು ಗ್ರಾಹಕರು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಇದರ ಲಿಂಕ್​ ವೆಬ್​ಸೈಟ್​​ನಲ್ಲಿ ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
