ಬೆಳಗಾವಿ:ಬಿರಿಯಾನಿ ಜಾಹೀರಾತಿನಲ್ಲಿ ಸಾಧು-ಸಂತರಿಗೆ ಅವಮಾನ ಆಗುವ ರೀತಿಯಲ್ಲಿ ಪ್ರಕಟಿಸಿರುವ ಹೊಟೇಲ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ಬೆಳಗಾವಿಯ ನಿಯಾಜ್ ಹೋಟೆಲ್ ಮಾಲೀಕ ನಿಯಾಜ್​ ಸೌದಾಗರ್ ಬಂಧಿತ ಉದ್ಯಮಿ.
ಬಿರಿಯಾನಿ ಕುರಿತಂತೆ ನಿಯಾಜ್​ ಹೋಟೆಲ್​ನಿಂದ ಬುಧವಾರವಷ್ಟೇ ಜಾಹೀರಾತೊಂದನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಸಾಧು-ಸಂತರಿಗೆ ಅವಮಾನ ಮಾಡಲಾಗಿದೆ ಎಂದು ಹಿಂದುಪರ ಹೋರಾಟಗಾರರು ಆರೋಪಿಸಿದ್ದರು. ಬಿರಿಯಾನಿ ಜಾಹೀರಾತಿನ ಮೂಲಕ ಸಾಧು-ಸಂತರನ್ನು ಅವಮಾನಿಸಿರುವ ಹೋಟೆಲ್​ ಮಾಲೀಕರ ವಿರುದ್ಧ ಕ್ರಮಜರುಗಿಸಬೇಕು ಎಂದು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.
ಹಿಂದುಪರ ಕಾರ್ಯಕರ್ತರ ದೂರಿನ ಮೇರೆಗೆ ಮಾರ್ಕೆಟ್​ ಠಾಣೆ ಪೊಲೀಸರು ನಿಯಾಜ್​ ಹೋಟೆಲ್ ಮಾಲೀಕರನ್ನು ವಶಕ್ಕೆ ಪಡೆದಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಸಾಧು-ಸಂತರ ಅವಮಾನದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದೂ ಹಿಂದುಪರ ಹೋರಾಟಗಾರರು ಆಗ್ರಹಿಸಿದ್ದರು.

ಭಾರತದಲ್ಲಿ ಪ್ರತಿನಿತ್ಯ 1,157 ಮಹಿಳೆಯರು ನಾಪತ್ತೆ!; ದೇಶದಲ್ಲಿ ಹೆಚ್ಚಾಗಿದೆ ಸ್ತ್ರೀಯರ ಮಿಸ್ಸಿಂಗ್​ ಕೇಸ್​..

ಮತ್ತೆ ಎದುರಾಯ್ತು ಹಬ್ಬಗಳಿಗೂ ನಿರ್ಬಂಧ; ಮನೆ-ದೇವಸ್ಥಾನಗಳ ಒಳಗಷ್ಟೇ ಹಬ್ಬ ಆಚರಿಸಿ ಎಂದು ಆದೇಶಿಸಿದ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
