ಮೈಸೂರು:ಕೇಂದ್ರ ಇಂಟೆಲಿಜೆನ್ಸ್​ ಬ್ಯೂರೋ ನಿವೃತ್ತ ಅಧಿಕಾರಿಯೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದು, ಅವರನ್ನು ಕೊಲೆ ಮಾಡಿರುವ ಶಂಕೆಯೂ ಮೂಡಿದೆ. ಮೈಸೂರಿನಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಕೇಂದ್ರ ಇಂಟೆಲಿಜೆನ್ಸ್ ಬ್ಯೂರೋ ನಿವೃತ್ತ ಅಧಿಕಾರಿ ಆರ್.ಎನ್​.ಕುಲಕರ್ಣಿ (83) ಸಾವಿಗೀಡಾದವರು. ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್​​ನಲ್ಲಿ ಶುಕ್ರವಾರ ಸಂಜೆ ಈ ಅಪಘಾತ ನಡೆದಿತ್ತು. ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಕಿಂಗ್ ಮಾಡುತ್ತಿದ್ದ ಆರ್.ಎನ್. ಕುಲಕರ್ಣಿ ಅವರಿಗೆ ಕಾರೊಂದು ಡಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡ ಕುಲಕರ್ಣಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ. ಅಪಘಾತದ ಬಳಿಕ ಕಾರು ಚಾಲಕ ವಾಹಸಸಮೇತ ಪರಾರಿಯಾಗಿದ್ದಾನೆ. ಮೇಲ್ನೋಟಕ್ಕೆ ಇದೊಂದು ಹಿಟ್ ಆ್ಯಂಡ್ ರನ್ ಪ್ರಕರಣದಂತೆ ಕಂಡುಬಂದರೂ ಕೊಲೆ ಶಂಕೆ ಮೂಡಿದೆ.
ಕಾರಿಗೆ ನಂಬರ್ ಪ್ಲೇಟ್ ಇಲ್ಲದಿರುವುದು ಕಂಡುಬಂದಿದೆ, ಅಲ್ಲದೆ ರಸ್ತೆಯ ಬದಿಯಲ್ಲಿದ್ದರೂ ಅಪಘಾತವೆಸಗಿ ಪರಾರಿಯಾಗಿರುವುದು ಸಾಕಷ್ಟು ಅನುಮಾನ ಮೂಡಿಸಿದೆ. ಈ ಬಗ್ಗೆ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಕುಲಕರ್ಣಿಯವರು 23 ವರ್ಷಗಳ ಹಿಂದೆ ನಿವೃತ್ತರಾಗಿದ್ದರು.
ಉದ್ಯಮಿ ಸೈರಸ್​ ಮಿಸ್ತ್ರಿ ಸಾವು; ಲೇಡಿ ಡಾಕ್ಟರ್​ ವಿರುದ್ಧ ಕೇಸ್..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 1 =
Remember me
