ನೆಲಮಂಗಲ: ಮಗಳು ಬೇರೆ ಜಾತಿ ಯುವಕನನ್ನು ವಿವಾಹವಾದಳು ಎಂಬ ಕಾರಣಕ್ಕೆ ಮನನೊಂದ ದಂಪತಿ ಶುಕ್ರವಾರ ಸಂಪ್​ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ದುರಂತ ನಡೆದಿದೆ.
ಬೆಂಗಳೂರು ಉತ್ತರ ತಾಲೂಕಿನ ಹ್ಯಾರೋಕೇತನಹಳ್ಳಿಯಲ್ಲಿ ಗ್ರಾಮದ ನಿವಾಸಿ ಶಿವಲಿಂಗಪ್ಪ (51) ಚಂದ್ರಕಲಾ (45) ಮೃತರು. ಮೂಲತಃ ಹಾಸನ ಜಿಲ್ಲೆಯ ಹಾರನಹಳ್ಳಿಯವರಾದ ದಂಪತಿಯ ಹಿರಿಯ ಪುತ್ರಿ ಖಾಸಗಿ ಕಂಪನಿಗೆ ಕೆಲಸಕ್ಕೆ ಹೋಗುತ್ತಿದ್ದಾಗ ದಾವಣಗೆರೆ ಮೂಲದ ಯುವಕನನ್ನು ಪ್ರೀತಿಸಿದ್ದಳು. ವಿಚಾರ ತಿಳಿದ ಪಾಲಕರು ಇಬ್ಬರಿಗೂ ಬುದ್ದಿ ಹೇಳಿದ್ದರು.
5 ತಿಂಗಳು ಮನೆಯಲ್ಲಿಯೇ ಇದ್ದ ಯುವತಿ ಕೆಲ ದಿನಗಳಿಂದ ಮತ್ತೆ ಕೆಲಸಕ್ಕೆ ಹೋಗುತ್ತಿದ್ದಳು. ಪಾಲಕರು ಮಗಳಿಗೆ ವರನ ಅನ್ವೇಷಣೆಯಲ್ಲಿ ತೊಡಗಿದ್ದರು. ಆದರೆ ಗುರುವಾರ ಕೆಲಸಕ್ಕೆ ಹೋದವಳು ಮನೆಗೆ ಬಾರದೆ ಪ್ರೀತಿಸುತ್ತಿದ್ದ ಯುವಕನನ್ನೇ ವಿವಾಹವಾಗಿರುವುದಾಗಿ ತಿಳಿಸಿದ್ದಾಳೆ. ವಿಚಾರ ತಿಳಿದ ದಂಪತಿ ಕಿರಿಯ ಪುತ್ರಿ ಮಲಗಿದ ನಂತರ ಡೆತ್​ನೋಟ್​ನಲ್ಲಿ ನಮ್ಮ ಸಾವಿಗೆ ನಾವೇ ಕಾರಣ, ತಾವು ಇಬ್ಬರಿಗೆ ಕೊಡಬೇಕಿರುವ 7 ಸಾವಿರ ರೂ. ಸಾಲ ಹಾಗೂ ಬ್ಯಾಂಕ್ ಖಾತೆಯಲ್ಲಿರುವ ಹಣ ಹಾಗೂ ಎಟಿಎಂ ಪಿನ್​ ಸಂಖ್ಯೆ ಬರೆದಿಟ್ಟು ಮೃತಪಟ್ಟಿದ್ದಾರೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ ಕೂದ್ಲು ಯಾಕಿಷ್ಟೊಂದು ಉದುರ್ತಾ ಇದೆ?!!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen + seven =
Remember me
