ಬೆಂಗಳೂರು:ಆಸಿಡ್ ದಾಳಿಗೊಳಗಾದ ಸಂತ್ರಸ್ತ ಮಹಿಳೆಯರಿಗೆ ಬದುಕಿನಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ರಾಜೀವ್ ಗಾಂದಿ ವಸತಿ ನಿಗಮದಿಂದ ವಸತಿ ಸೌಲಭ್ಯ ಮತ್ತು ಸ್ವಯಂ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದ್ದಾರೆ.
ಆಸಿಡ್ ದಾಳಿ ಮಹಿಳೆಯರಿಗೆ ನೀಡುತ್ತಿರುವ ಮಾಸಾಶನವನ್ನು ಈಗಾಗಲೇ 3,000 ರೂ. ಗಳಿಂದ 10,000 ರೂ. ಗಳಿಗೆ ಹೆಚ್ಚಿಸಲಾಗಿದೆ. ಇದಲ್ಲದೆ, ಹೆಚ್ಚಿನ ಚಿಕಿತ್ಸೆಗೆ ಮತ್ತು ಕಾನೂನು ನೆರವು ನೀಡಲು ಮಹಿಳಾ ಅಭಿವೃದ್ಧಿ ನಿಗಮದಲ್ಲಿ ವಿಶೇಷ ನಿಧಿ ಸ್ಥಾಪಿಸಲಾಗುವುದು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ. ಈ ಬಾರಿಯ ಬಜೆಟ್​ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಆಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + sixteen =
Remember me
