ಬೆಂಗಳೂರು:ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ ದಕ್ಷಿಣ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಮಂಗಳೂರಿನ ಮಂಗಳಾದೇವಿ ಜಾತ್ರೆಯಲ್ಲಿ ಹಿಂದೂಗಳ ಮಳಿಗೆಗಳಿಗೆ ಭಗವಾ ಧ್ವಜ ಕಟ್ಟಿದ ಹಾಗೂ ಭಗವಾ ಧ್ವಜವಿದ್ದ ಮಳಿಗೆಗಳಲ್ಲಿ ಮಾತ್ರವೇ ಹಿಂದೂಗಳು ವ್ಯಾಪಾರ ಮಾಡಬೇಕು ಎಂದು ಪ್ರಕಟಣೆ ಹೊರಡಿಸಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಶರಣ್ ಪಂಪ್‌ವೆಲ್ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ
ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಶರಣ್ ಪಂಪ್‌ವೆಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರ ರಜಾಕಾಲದ ನ್ಯಾಯಪೀಠ, ಈ ಆದೇಶ ಮಾಡಿದೆ. ಜತೆಗೆ, ಮಂಗಳೂರು ದಕ್ಷಿಣ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿ, ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಪ್ರಕಟಣೆ ಹೊರಡಿಸಲಾಗಿದೆ ಎಂಬ ದೂರಿನಲ್ಲಿ ಹುರುಳಿಲ್ಲ. ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲು ಮಾಡಿಕೊಂಡಿರುವ ಪ್ರಕರಣ ರಾಜಕೀಯ ಪ್ರೇರಿತವಾಗಿದೆ ಮತ್ತು ದುರುದ್ದೇಶದಿಂದ ಕೂಡಿದೆ. ಆದ್ದರಿಂದ, ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಕೋರಿದರು.
ಏನಿದು ಪ್ರಕರಣ?ಮಂಗಳಾದೇವಿ ದೇವಸ್ಥಾನದ ಸುತ್ತಮುತ್ತಲಿನ ಹಿಂದೂಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಶರಣ್ ಪಂಪ್‌ವೆಲ್ ಅವರು ತಮ್ಮ ಕಾರ್ಯಕರ್ತರೊಂದಿಗೆ ಅ.೧೬ರಂದು ಭಗವಾ ಧ್ವಜ ಕಟ್ಟಿದ್ದರು. ಈ ಕ್ರಮಗಳು ಮತ್ತು ಹೇಳಿಕೆಗಳು ಧಾರ್ಮಿಕ ವೈಷಮ್ಯವನ್ನು ಕೆರಳಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಮನೋಹರ್ ಪ್ರಸಾದ್ ನೀಡಿದ ದೂರಿನ ಆಧಾರದ ಮೇಲೆ ಶರಣ್ ಪಂಪ್‌ವೆಲ್ ಹಾಗೂ ಇತರರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 5 =
Remember me
