ಬೆಂಗಳೂರು:ಈ ಬಾರಿಯ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಈ ಬಾರಿ ಉತ್ತಮ ಚಿತ್ರಗಳ ಆಯ್ಕೆಯಾಗಿದೆ. ಈ ಸಿನೆಮಾಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಇಂದು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಬಳಿ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬೆಂಗಳೂರು ಅಂತರಾಷ್ಟ್ರೀಯ ನಗರ. ಪ್ರತಿದಿನ ಐದು ಸಾವಿರಕ್ಕೂ ಹೆಚ್ಚು ಜನ ವಿಜ್ಞಾನಿಗಳು ಬರುತ್ತಾರೆ‌. 400 ಆರ್ ಆ್ಯಂಡ್ ಡಿ ಕೇಂದ್ರಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಬೆಳೆದಿದೆ‌. ಇಲ್ಲಿ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಡೆಯದೆ ಇನ್ನೆಲ್ಲಿ ನಡೆಯುತ್ತದೆ.
ಸಿನೆಮಾಗೆ ಬಹಳ ದೊಡ್ಡ ಇತಿಹಾಸ ಇದೆ. ಅತ್ಯಂತ ಅದ್ಬುತವಾದ ತಂತ್ರಜ್ಞಾನ ಬಳಕೆಯಾಗುತ್ತಿದೆ. ಡಿಜಿಟಲೀಕರಣ ಆದ ಮೇಲೆ ಬಹಳಷ್ಟು ಬದಲಾವಣೆ ಆಗಿದೆ. ನಾವು ನೋಡುವುದಕ್ಕೂ, ನಮ್ಮ ಮಕ್ಕಳು ಸಿನೆಮಾ ನೋಡುವುದಕ್ಕು ವ್ಯತ್ಯಾಸ ಇದೆ. ಬದುಕಿನಲ್ಲಿ ಎಲ್ಲವೂ ವೇಗವಾಗಿ ಬೆಳೆಯುತ್ತಿರುವುದರಿಂದ ಸಿನೆಮಾದಲ್ಲಿಯೂ ವೇಗವಾಗಿ ಬೆಳವಣಿಗೆ ಆಗುತ್ತಿದೆ. ಈಗ ತಂತ್ರಜ್ಞಾನದ ಮೂಲಕ ಹೋದರೆ ಯಶಸ್ಸು ಸಿಗುತ್ತದೆ ಎಂದರು.
ಕಾಂತಾರ ಬಗ್ಗೆ ಯಾರು ನಿರೀಕ್ಷೆ ಮಾಡಿರಲಿಲ್ಲ. ಕಾಂತಾರ ಸ್ಥಳೀಯ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗದುಕೊಂಡು ಹೋಗಿದ್ದು, ಆ ತಂಡಕ್ಕೆ ಅಭಿನಂದನೆಗಳು.
ತ್ರಿಬಲ್ ಆರ್ ಸಿನೆಮಾ ಆಸ್ಕರ್ ಪಡೆದಿದ್ದು ನಾವೆಲ್ಲ ಹೆಮ್ಮೆ ಪಡಬೇಕು‌. ಇದರಿಂದ ಆಸ್ಕರ್ ನಮಗೆ ದೂರ ಇಲ್ಲ. ಪ್ರತಿವರ್ಷ ಪಡೆಯಬಹುದು ಅಂತ ತೋರಿಸಿ ಕೊಟ್ಟಿದೆ.‌ ಈ ವರ್ಷ ಫೆಸ್ಟಿವಲ್ ನಲ್ಲಿ ಉತ್ತಮ ಸಿನೆಮಾಗಳನ್ನು ಆಯ್ಕೆ ಮಾಡಿದ್ದಾರೆ. ಸಿನೆಮಾಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ ಎಂದರು.
ಸಿನೆಮಾ ಇಲ್ಲದೆ ನಮ್ಮ ಬದುಕಿಲ್ಲ. ಹೀಗಾಗಿ ಸಿನೆಮಾಗಾಗಿ ನಾನು ಏನೆಲ್ಲ ಬೇಕು, ಅದನ್ನು ಮಾಡಿದ್ದೇನೆ. ಸಿನೆಮಾ ಸಬ್ಸಿಡಿ ಹೆಚ್ಚಿಗೆ ಮಾಡಿದ್ದೇನೆ.  ಸಬ್ಸಿಡಿ ಪಡೆಯುವ ಚಿತ್ರಗಳ ಸಂಖ್ಯೆ ಹೆಚ್ಚಳ ಮಾಡಿದ್ದೇನೆ. ಫಿಲ್ಮ್‌ ಸಿಟಿ ಕೂಡ ಆಗಲಿದೆ. ಅಲ್ಲಿ ಹಾಲಿವುಡ್ ಚಿತ್ರಗಳೂ ಶೂಟಿಂಗ್ ಆಗಬೇಕು ಎಂದರು.
ನಾವು ಈಗಾಗಲೇ ಪವರ್ ಸ್ಟಾರ್ ಪುನೀತ ರಾಜಕುಮಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದೇವೆ. ಅವರ ಹೆಸರಿನಲ್ಲಿ ಸ್ಮಾರಕ ಮಾಡಲು ಎಲ್ಲ ಸಿದ್ಧತೆ ನಡೆದಿದೆ. ಇದೇ ವರ್ಷ ನಟ ದಿ.ಪುನಿತ್ ರಾಜಕುಮಾರ್ ಅವರ ಸ್ಮಾರಕ ಅಭಿವೃದ್ಧಿ ಮಾಡುತ್ತೇವೆ. ಇದರ ಜೊತೆಗೆ ಅಂಬರೀಶ್ ಅವರ ಸ್ಮಾರಕ ಸಿದ್ದವಾಗುತ್ತಿದೆ. ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು ತೀರ್ಮಾನಿಸಲಾಗಿದೆ. ಮಾರ್ಚ್ 27 ರಂದು ಸ್ಮಾರಕ ಹಾಗೂ ಹೆಸರಿಡುವ ಕಾರ್ಯಕ್ರಮ ಮಾಡುತ್ತೇವೆ ಎಂದರು.
ಈ ಸಂದರ್ಭಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,  ಸಂಸದ ರಾಜೀವ್ ಚಂದ್ರಶೇಖರ್, ಸಚಿವ ಆರ್. ಅಶೋಕ್  ಹಾಗೂ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ, ಹರ್ಷಿಕಾ, ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮಾ ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
