ಬೆಂಗಳೂರು:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನ ಅರಮನೆ ಮೈದಾನದಲ್ಲಿ ಜೂನ್ ೨೧ ರಂದು ಆಯೋಜನೆ ಆಗಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರನ್ಸ್ ನಡೆಸಿ ಪೂರ್ವಭಾವಿ ಸಿದ್ಧತೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದರು.
ಯೋಗ ದಿನಾಚರಣೆ ಮೈಸೂರಿನ ಅರಮನೆ ಆವರಣದಲ್ಲಿ ಆಯೋಜಿಸಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ಆಗಮನವನ್ನು ಎದುರು ನೋಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮೊದಲಾದವರು ಪಾಲ್ಗೊಂಡಿದ್ದರು.
ಪೆಟ್ರೋಲ್​ ಬಂಕ್​ಗಳ ಮುಂದೆ ಜನವೋ ಜನ: ನಾಳೆಯೇ ಮುಷ್ಕರ ಎಂದು ಬಂದವರಿಂದಾಗಿ ನೂಕುನುಗ್ಗಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − one =
Remember me
