ಬೆಂಗಳೂರು: ಸ್ವಯಂಘೋಷಿತ ವಿಶ್ವಗುರು ನರೇಂದ್ರ ಮೋದಿಯವರ ಹಾಗೂ ಭಾರತದ ಮಾನವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಕಳೆದು ಹಾಕಿದ್ದಾರೆ ಎಂದು ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಟೀಕಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನನ್ನು ತಾನು ವೈಭವೀಕರಿಸಿಕೊಳ್ಳುವ ಪ್ರಧಾನಿಗಳು ಅಮೆರಿಕಾದ ಅಧ್ಯಕ್ಷರಿಂದ ಕಿವಿಮಾತು ಹೇಳಿಸಿಕೊಳ್ಳುವ ದುಸ್ಥಿತಿ ಬಂದಿದೆ. ಯಾರೂ ಹೇಳದೆ ಇದ್ದರೂ ತಮ್ಮನ್ನು ತಾವೇ ವಿಶ್ವಗುರು ಎಂದು ಕರೆಸಿಕೊಳ್ಳುವ ಅವರಿಗೆ ಭಾರತದಲ್ಲಿ ಮಾನವ ಹಕ್ಕು, ಪತ್ರಿಕಾ ಸ್ವಾತಂತ್ರ್ಯ ಉಲ್ಲಂಘನೆಯಾಗುತ್ತಿದೆ ಎಂದು ತಿಳಿಯುತ್ತಿಲ್ಲವೇ. ಇವುಗಳಿಗೆ ಗೌರವ ಕೊಡಿ ಎಂದು ಅಮೆರಿಕಾದ ಅಧ್ಯಕ್ಷರು ಹೇಳಬೇಕೆ? ಎಂದು ಪ್ರಶ್ನಿಸಿದರು.ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ, ಮಾನವ ಹಕ್ಕುಗಳ ಸ್ವಾತಂತ್ರ್ಯವಿಲ್ಲ ಎಂಬ ವಿಚಾರ ಇಡೀ ವಿಶ್ವಕ್ಕೆ ಸ್ವಷ್ಟವಾದ ಸಂದೇಶ ಹೋಗಿದೆ. ಪ್ರಧಾನಿಗಳಿಗೆ ವಿಶ್ವಮಟ್ಟದಲ್ಲಿ ಕಪಾಳಮೋಕ್ಷವಲ್ಲವೇ? ಮಣಿಪುರದಲ್ಲಿ ನಡೆದ ಗಲಭೆ ವಿಚಾರವಾಗಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿತ್ತು ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − seventeen =
Remember me
