ಮೈಸೂರು:ಪ್ರತಿಭಟನೆ ವೇಳೆ ‘ಫ್ರೀ ಕಾಶ್ಮೀರ’ ನಾಮಫಲಕ ಪ್ರದರ್ಶಿಸಿದ್ದ ನಳಿನಿ ಬಾಲಕುಮಾರ್ ಅವರನ್ನು ಪೊಲೀಸರು ಶನಿವಾರ ಏಳು ಗಂಟೆಗೂ ಹೆಚ್ಚು ಕಾಲ ವಿಚಾರಣೆಗೆ ಒಳಪಡಿಸಿದರು. ತಂದೆ ಬಾಲಕುಮಾರ್ ಅವರೊಂದಿಗೆ ಬೆಳಗ್ಗೆ ಠಾಣೆಗೆ ಆಗಮಿಸಿದ ನಳಿನಿ ಅವರನ್ನು ಡಿಸಿಪಿ ಮುತ್ತುರಾಜ್, ಎಸಿಪಿ ಶಿವಶಂಕರ್ ಪ್ರಥಮ ಹಂತದಲ್ಲಿ ಸತತ 5 ಗಂಟೆ, ಊಟದ ವಿರಾಮದ ಬಳಿಕ ಎರಡು ಗಂಟೆ ವಿಚಾರಣೆಗೆ ಒಳಪಡಿಸಿದರು.
ವಿಚಾರಣೆಗಾಗಿ ಮೊದಲೇ ತಯಾರಿಸಿಟ್ಟುಕೊಂಡಿದ್ದ 80 ಪ್ರಶ್ನೆಗಳನ್ನು ಅಧಿಕಾರಿಗಳು ನಳಿನಿ ಮುಂದಿಟ್ಟರು. ಇವುಗಳಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರಿಸಿದರೆ, ಕೆಲ ಪ್ರಶ್ನೆಗಳಿಗೆ ಮೌನ, ಮತ್ತೆ ಕೆಲವು ಪ್ರಶ್ನೆಗಳಿಗೆ ನನಗೆ ಗೊತ್ತಿಲ್ಲ ಎನ್ನುವ ಉತ್ತರ ನೀಡಿದರು ಎನ್ನಲಾಗಿದೆ. ವಿಚಾರಣೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ನಳಿನಿ, ನಾನು ಪತ್ರಿಕಾ ಹೇಳಿಕೆ ನೀಡಿರುವುದನ್ನೇ ಪೊಲೀಸರ ಮುಂದೆಯೂ ಹೇಳಿದ್ದೇನೆ. ಪೊಲೀಸರ ವಿಚಾರಣೆಗೆ ಸಹಕರಿಸಿದ್ದೇನೆ ಎಂದಷ್ಟೇ ಹೇಳಿ ಹೊರ ನಡೆದರು. ಹೊಸದಿಲ್ಲಿಯ ಜೆಎನ್​ಯುುನಲ್ಲಿ ನಡೆದ ಹಲ್ಲೆ ಖಂಡಿಸಿ ಜ.8ರಂದು ಮಾನಸಗಂಗೋತ್ರಿಯಲ್ಲಿ ಆಯೋಜಿಸಿದ್ದ ಪ್ರತಿಭಟನೆ ವೇಳೆ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದ್ದ ನಳಿನಿ ಭಾಗವಹಿಸಿ ‘ಫ್ರೀ ಕಾಶ್ಮೀರ’ ಎಂದು ಬರೆದಿದ್ದ ನಾಮಫಲಕ (ಪ್ಲೇಕಾರ್ಡ್) ಪ್ರದರ್ಶಿಸಿದ್ದರು. ಈ ಕುರಿತು ಸಿಂಡಿಕೇಟ್ ಸದಸ್ಯ ಡಾ.ಇ.ಸಿ.ನಿಂಗರಾಜು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿ ಕುಲಪತಿ, ಕುಲಸಚಿವರಿಗೆ ಕ್ರಮಕೈಗೊಳ್ಳಲು ಮನವಿ ಸಲ್ಲಿಸಿದ್ದರು. ಅಲ್ಲದೆ, ರಾಜ್ಯಪಾಲರು ಸಹ ಈ ಕುರಿತು ವಿಶ್ವವಿದ್ಯಾಲಯದಿಂದ ವರದಿ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ನಳಿನಿ ಹಾಗೂ ಪ್ರತಿಭಟನೆ ಆಯೋಜಿಸಿದ್ದವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಕ್ಷಮೆಯಾಚನೆ:ಘಟನೆ ಬಳಿಕ ವಿವಾದ ಉಂಟಾಗಿದ್ದರಿಂದ ವಿಡಿಯೋ ಸಂದೇಶ ಮಾಡಿದ್ದ ನಳಿನಿ, ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸೇರಿ ರದ್ದಾಗಿರುವ ಸೇವೆಗಳನ್ನು ಆರಂಭಿಸಬೇಕು ಎಂಬುದು ನನ್ನ ಉದ್ದೇಶವಾಗಿತ್ತು. ಅದಕ್ಕೆ ಫ್ರೀ ಕಾಶ್ಮೀರ ಎಂದು ಪೋಸ್ಟ್​ನಲ್ಲಿ ಬರೆದುಕೊಂಡಿದ್ದೆ. ಆದರೆ, ಅದರಿಂದ ಉಂಟಾಗಿರುವ ಗೊಂದಲಕ್ಕಾಗಿ ಕ್ಷಮೆಯಾಚಿಸುತ್ತೇನೆ ಎಂದಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + eighteen =
Remember me
