ಬೆಂಗಳೂರು:ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ 2024-25ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಪ್ರತಿ ವರ್ಷ ಲಾನುಭವಿಗಳಿಗಾಗಿ ಸಾಲ, ಶೈಕ್ಷಣಿಕ ಸಾಲ, ವೈದ್ಯಕೀಯ, ಶಿಕ್ಷಣ ಹೀಗೆ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಬಾರಿಯೂ ಸಮುದಾಯದ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಆಸಕ್ತರು ಆ.31, ರೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ತಿಳಿಸಿದ್ದಾರೆ.
ಬಸವ ಬೆಳಗು ಯೋಜನೆಈ ಯೋಜನೆಯಡಿ ಸಾಲಕ್ಕೆ ಅರ್ಜಿ ಸಲ್ಲಿಸುವವರು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿರಬೇಕು. ಕುಟುಂಬದ ವಾರ್ಷಿಕ ಆದಾಯ 3.5 ಲಕ್ಷ ರೂ.ಗಿಂತ ಹೆಚ್ಚಿರಬಾರದು.ವೃತ್ತಿಪರ ಕೋರ್ಸ್‌ಗಳಾದ ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ 28 ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆ ವಾರ್ಷಿಕ 1 ಲಕ್ಷದಿಂದ ಗರಿಷ್ಟ 4 ಲಕ್ಷದಿಂದ 5 ಲಕ್ಷದವರೆಗೆ ಶೇ.2 ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಸಿಇಟಿ/ನೀಟ್ ಪ್ರವೇಶ ಪರೀಕ್ಷೆಯಲ್ಲ ಉತ್ತೀರ್ಣರಾಗಿ ಸೀಟು ಪಡೆದಿರಬೇಕು.2022-2023ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 3ನೇ ಕಂತಿನ ನವೀಕರಣ ಸಾಲ ಹಾಗೂ 2023-24 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು.
ವಿದೇಶ ವಿದ್ಯಾವಿಕಾಸ ಯೋಜನೆಈ ಯೋಜನೆಯಡಿ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬ ವಾರ್ಷಿಕದ ಆದಾಯ ರೂ.8.00 ಲಕ್ಷಗಳ ಮಿತಿಯಲ್ಲಿರಬೇಕು.ವಿದ್ಯಾರ್ಥಿಗಳು ಕಿಖ ಟಡಿಟಜ ಖಚಿಟಿಞಜಿಟಿಜ 500 ರೊಳಗೆ ಬರುವ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್, ಪಿಹೆಚ್ಡಿ, ಮಾಸ್ಟರ್ ಆಗಿರಬೇಕು.ಡಿಗ್ರಿ ಕೋರ್ಸ್ಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ.10.00 ಲಕ್ಷಗಳಂತೆ 3ವರ್ಷದವರೆಗೆ ಒಟ್ಟು ರೂ.20.00 ಲಕ್ಷಗಳನ್ನು ಶೂನ್ಯಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ
ವಿದೇಶ ವಿದ್ಯಾವಿಕಾಸ ಯೋಜನೆ2022-23 ಮತ್ತು 2023-24 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು.
ಜೀವಜಲ ಯೋಜನೆ:ವಿದ್ಯಾರ್ಥಿಗಳು ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿರಬೇಕು.ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಮಿತಿಯೊಳಗಿರಬೇಕು.ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಘಟಕ ವೆಚ್ಚ ರೂ. 4.75 ಲಕ್ಷಗಳಲ್ಲಿ ರೂ. 4.25 ಲಕ್ಷಗಳು ಸಹಾಯಧನ, ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.ಉಳಿದ ಜಿಲ್ಲೆಗಳಿಗೆ ಘಟಕ ವೆಚ್ಚರೂ. 3.75 ಲಕ್ಷಗಳಲ್ಲಿ ರೂ.3.25 ಲಕ್ಷ ಸಹಾಯಧನ, ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುತ್ತದೆ.ದಕ್ಷಿಣಕನ್ನಡ, ಉಡುಪಿ, ಕೊಡಗು, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು.ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಈಚಿಡಿಞಛಿಡಿ ಈಖಖಿಐಖಿ ಐಆ ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣಪತ್ರಹೊಂದಿರಬೇಕು.
ಕಾಯಕ ಕಿರಣ ಯೋಜನೆ:
ವೀರಶೈವ-ಲಿಂಗಾಯತ ಸಮುದಾಯದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಈ ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯಒದಗಿಸಲಾಗುವುದು.ಘಟಕ ವೆಚ್ಚ ರೂ.1,00,000/- ಗಳಿಗೆ ಶೇ.20ರಷ್ಟು ಗರಿಷ್ಠ ರೂ.20,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.80ರಷ್ಟು ಗರಿಷ್ಠ ರೂ.80,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.ಘಟಕವೆಚ್ಚ ರೂ.2,00,000/- ಗಳಿಗೆ ಶೇ.15ರಷ್ಟು ಗರಿಷ್ಠ ರೂ.30,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.85ರಷ್ಟು ಗರಿಷ್ಠ ರೂ.1,70,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.
ಭೋಜನಾಲಯ ಕೇಂದ್ರ
ಸಮುದಾಯದ ಜನರು ಹೋಟೆಲ್ (ಖಾನಾವಳಿ)ಉದ್ಯಮಕೈಗೊಳ್ಳಲು ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುವುದು. ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ ರೂ. 5.00 ಲಕ್ಷ ಇದರಲ್ಲಿ ರೂ.4,60,000/- ಬ್ಯಾಂಕ್ ಸಾಲ ಪಡೆದಿದ್ದಲ್ಲಿ ರೂ. 40,000/- ಸಹಾಯಧನ ನೆರವು ನೀಡಲಾಗುವುದು. ಲಾನುಭವಿಗಳು ತಮ ಸ್ವಂತ ಹೆಸರಿನಲ್ಲಿ ಕನಿಷ್ಠ 20್ಡ30 ಅಳತೆಯುಳ್ಳ ನಿವೇಶನ ಹೊಂದಿರಬೇಕು.
ವಿಭೂತಿ ನಿರ್ಮಾಣ ಘಟಕ:
ವೀರಶೈವ-ಲಿಂಗಾಯತ ಸಮುದಾಯದವರು ವಿಭೂತಿಯನ್ನು ತಯಾರಿಸುವವರಿಗೆ ಸಾಲ ಮತ್ತು ಸಹಾಯಧನ ನೀಡುವ ಯೋಜನೆ ಇದಾಗಿದೆ. ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳು ಮತ್ತು 18 ರಿಂದ 55 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿಸಲ್ಲಿಸಬಹುದು. ವಿಭೂತಿ ನಿರ್ಮಾಣ ಘಟಕ ನಿರ್ಮಿಸಲು ಘಟಕ ವೆಚ್ಚರೂ. 4.00 ಲಕ್ಷ ಇದರಲ್ಲಿ ರೂ.3,60,000/- ನಿಗಮದಿಂದ ಸಾಲ ಮತ್ತುರೂ. 40,000/- ಸಹಾಯಧನ ವಾರ್ಷಿಕ ಶೇ.3 ರ ಬಡ್ಡಿದರದಲ್ಲಿ ನೆರವು ನೀಡಲಾಗುವುದು.
ಸ್ವಾವಲಂಬಿ ಸಾರಥಿ ಯೋಜನೆ (ವಾಣಿಜ್ಯಬ್ಯಾಂಕ್ಗಳ ಸಹಯೋಗದಲ್ಲಿ)
ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲುಸ್ವಾವಲಂಭಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರವಾಹನ (ಹಳದಿಬೊರ್ಡ್) ಖರೀದಿಗೆ ಪಡೆಯುವ ಸಾಲಕ್ಕೆ ಶೇ.50ರಷ್ಟುಅಥವಾ ಗರಿಷ್ಠ 3.00 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರುಮಾಡಲಾಗುತ್ತದೆ.ಉಳಿದಮೊತ್ತವನ್ನುಬ್ಯಾಂಕ್/ ಹಣಕಾಸುಸಂಸ್ಥೆಗಳಮೂಲಕಅವರುವಿಸುವಚಾಲ್ತಿಬಡ್ಡಿದರದಲ್ಲಿಸಾಲಪಡೆಯುವುದು.ವಯೋಮಿತಿ 21 ರಿಂದ 45 ವರ್ಷಗಳವಯೋಮಿತಿಯಲ್ಲಿರುವವರುಅರ್ಜಿಸಲ್ಲಿಸಬಹುದು.
ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದಲ್ಲಿ )
ನಿರುದ್ಯೋಗಿಗಳಿಗೆ ಸ್ವಯಂಉದ್ಯೋಗ ಕಲ್ಪಿಸಿಕೊಳ್ಳಲು ಅವರುಕೈಗೊಳ್ಳುವ ಕೃಷಿ/ ಕೃಷಿಅವಲಂಭಿತ ಚಟುವಟಿಕೆಗಳು,ವ್ಯಾಪಾರ,ಸಾರಿಗೆ ಮತ್ತು ಯಂತೋಪಕರಣಗಳನ್ನು ಕೊಳ್ಳುವ ಆರ್ಥಿಕ ಚಟುವಟಿಕೆಗಳು/ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕ್ಗ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ.20 ರಷು ್ಟಅಥವಾ ಗರಿಷ್ಠರೂ. 1.00 ಲಕ್ಷಗಳಸಹಾಯ ಧನ ಮಂಜೂರು ಮಾಡಲಾಗುತ್ತದೆ.
ವಿಶೇಷಸೂಚನೆಅರ್ಜಿದಾರರು ತಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಫೀಡ್ ಮಾಡಿರಬೇಕು.ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ ಣಣಠಿ://ಞಟಜಛಿಟ.ಞಚಿಡಿಟಿಚಿಣಚಿಞಚಿ.ಜಟ.ಜಿಟಿಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522/ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ವಿವರಿಸಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:fifteen + 15 =
Remember me
